ಶಹಾಬಾದ: ಸರಕಾರಿ ನೌಕರರ ಬಹುದಿನಗಳ ಬೇಡಿಕೆಗಳಲ್ಲಿ ಒಂದಾದ ಶೇ೩ ರಷ್ಟು ತುಟ್ಟಿ ಭತ್ಯೆ ಹೆಚ್ಚಳವನ್ನು ಮಾಡಿ ಆದೇಶ ಹೊರಡಿಸಿದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸರಕಾರಿ ನೌಕರರ ಸಂಘದ ಶಹಾಬಾದ ತಾಲೂಕಾ ಅಧ್ಯಕ್ಷ ಈರಣ್ಣ ಕೆಂಭಾವಿ ಅಭಿನಂದಿಸಿ, ಹರ್ಷವ್ಯಕ್ತಪಡಿಸಿದ್ದಾರೆ.
ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅವಿರತವಾಗಿ ಶ್ರಮಿಸಿದ ಮತ್ತು ಶೇ೩ ರಷ್ಟು ತುಟ್ಟಿ ಭತ್ಯೆ ಹೆಚ್ಚಳವಾಗುವುದಕ್ಕೆ ಕಾರಣಿಕರ್ತರಾದ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ವಿ.ಎಸ್.ಷಡಕ್ಷರಿ ಅವರಿಗೂ ಧನ್ಯವಾಗದಗಳನ್ನು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.