ಬಿಸಿ ಬಿಸಿ ಸುದ್ದಿ

ಊಡಗಿ ಗ್ರಾಮಕ್ಕೆ ಪ್ರತ್ಯೇಕವಾಗಿ ಬಸ್ ಕಲ್ಪಿಸಿ: ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ

  • ಶಫೀಕ್ ಊಡಗಿ

ಸೇಡಂ: ತಾಲ್ಲೂಕಿನ ಊಡಗಿ ಗ್ರಾಮದ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದ ಕಾರಣಕ್ಕೆ ಶುಕ್ರವಾರ ಊಡಗಿ ಗ್ರಾಮದಲ್ಲಿ ವಿಧ್ಯಾರ್ಥಿಗಳು ರಸ್ತೆ ಮದ್ಯದಲ್ಲಿ ಕುಳಿತುಕೊಂಡು ದಿಢೀರ್ ಪ್ರತಿಭಟನೆ ನಡೆಸಿದರು.

ಊಡಗಿ ಮತ್ತು ಹಂಗನಹಳ್ಳಿ ಗ್ರಾಮದ ವಿದ್ಯಾರ್ಥಿಗಳಿಗೆ ಎರಡು ಗ್ರಾಮಗಳ ನಡುವೆ ಒಂದೇ ಬಸ್ ವ್ಯವಸ್ಥೆ ಇರುವುದರಿಂದ ಸುಮಾರು 350 ಶಾಲಾ ಕಾಲೇಜುಗಳ ವಿಧ್ಯಾರ್ಥಿಗಳು ದಿನನಿತ್ಯ ಬಸ್ಸಿನ ಭಾಗಿಲು ಜೋತು ಬಿದ್ದು ಶಾಲೆಗೆ ತೆರಳುವ ಪರಿಸ್ಥಿತಿ ಉಂಟಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಬಸ್ ವ್ಯವಸ್ಥಾಪಕ ಅಧಿಕಾರಿಗೆ ಒಂದು ವರ್ಷದಿಂದ ಹಲವು ಬಾರಿ ಬಸ್ ವ್ಯವಸ್ಥೆ ಕಲ್ಪಿಸಿಕೋಡುವ ಕುರಿತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮನವಿ ಪತ್ರ ಸಿಲಿಸಿದರು ಯಾವುದೇ ಪ್ರಯೋಜನಾ ಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು,

ಹಂಗನಹಳ್ಳಿ ವಾಯದಿಂದ ಉಡಗ್ಗಿ ಗ್ರಾಮಕ್ಕೆ ಬೆಳಗ್ಗೆ ೮:೫೫ ನಿಮಿಷಕ್ಕೆ ತಲುಪುತ್ತದೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಬಸ್ ಒಳ್ಳಗಡೆ ಜಾಗ ಇಲ್ಲದೇ ಒಬ್ಬರಿಂದ ಒಬ್ಬರ ಮೇಲೆ ಬಿದ್ದು ಬಾಗಿಲ ಬಳಿ ಯುವಕರು ಜೋತು ಬಿದ್ದು ಶಾಲೆಗೆ ತೆರಳಲು ದಿನನಿತ್ಯ ಹರಸಾಹಸ ಪಡುವಂತ ಪರಿಸ್ಥಿತಿ ಉಂಟಾಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗ್ಗೆ 9 ಗಂಟೆ ಸುಮಾರಿಗೆ ವಿಧ್ಯಾರ್ಥಿಗಳು ಬಸ್ ವ್ಯವಸ್ಥೆ ಕಲ್ಪಿಸಿಕೋಡುವಂತೆ ಒತ್ತಾಯಿಸಿ ದಿಢೀರ್‌ ರಸ್ತೆ ಮದ್ಯದಲ್ಲಿ ಕುಳಿತುಕೊಂಡು ಸುಮಾರು ಐದು ಗಂಟೆಗಳ ಕಾಲ ಯುವಕರು ಹಾಗೂ ಮಹಿಳೆಯರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಡಿಪೋ ಕಾರ್ಯಲಯದ ಸಿಬಂದಿ ಹಣಮಂತ ಅವರು ತೆರಳಿ ಅವರ ಮನವಿ ಪತ್ರ ಸ್ವೀಕರಿಸಿದ ನಂತರ ಶಾಲಾ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ಹಿಂಪಡೆದು ಕೊಂಡರು.

ಈ ಸಂದರ್ಭದಲ್ಲಿ ಊಡಗಿ ಗ್ರಾಮದ ಯುವಕರು ಹಾಗೂ ಹಿರಿಯರು ಸಾಥ್ ನೀಡಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago