ಬೆಂಗಳೂರು:ವರನಟ ಡಾ.ರಾಜಕುಮಾರ್ ಸುಪುತ್ರ, ಖ್ಯಾತ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿರುವುದು ಅತೀವ ಆಘಾತವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಕಿರಿಯ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಜನಪ್ರಿಯ ಮೇರು ನಟ, ಯುವಜನತೆಯ ಕಣ್ಮಣಿ, ಯೂಥ್ ಐಕಾನ್ ಆಗಿದ್ದ ಪುನೀತ್ ನಿಧನ ಹೊಂದಿರುವುದು ಕಲಾರಂಗಕ್ಕೆ ಬಹಳ ದೊಡ್ಡ ನಷ್ಟ, ವಿಧಿಯ ಕ್ರೂರ ಆಟ” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
“ವೈಯಕ್ತಿಕವಾಗಿ ಅತ್ಯಂತ ಆತ್ಮೀಯ ಸಹೃದಯ ಬಂಧುವನ್ನು ಕಳೆದುಕೊಂಡಿದ್ದೇನೆ. ಅವರ ಉತ್ಸಾಹ, ಪ್ರತಿಭೆ, ಅವರ ಅನೇಕ ಅತ್ಯುತ್ತಮ ಚಲನಚಿತ್ರಗಳನ್ನು, ಕನ್ನಡದ ಸಾಂಸ್ಕೃತಿಕ ರಾಯಭಾರಿಯಂತೆ ನಾಡಿನ ಸಮಸ್ತ ಜನತೆಯ ಮನೆ, ಮನ ತಲುಪಿದ್ದ ಅವರ ವ್ಯಕ್ತಿತ್ವವನ್ನು ಮರೆಯುವುದು ಸಾಧ್ಯವೇ ಇಲ್ಲ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ.”
ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಈ ದುಃಖಕರ ಸನ್ನಿವೇಶದಲ್ಲಿ, ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ, ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿಗಳು ಪುನೀತ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…