ಶಹಾಬಾದ: ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮ ಪಂಚಾಯತಿಯಲ್ಲಿ ಸುಮಾರು ಒಂದು ವರ್ಷದಿಂದ ಖಾಲಿ ಇರುವ ಕರ ವಸೂಲಿಗಾರ ಹುದ್ದೆಗೆ ಸರಕಾರದ ನಿಯಮಾವಳಿಯಂತೆ ಭರ್ತಿ ಮಾಡಬೇಕೆಂದು ಆಗ್ರಹಿಸಿ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಗ್ರಾಪಂ ಪಿಡಿಓ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈಗಾಗಲೇ ತೊನಸನಹಳ್ಳಿ(ಎಸ್) ಗ್ರಾಮ ಪಂಚಾಯತಿಯಲ್ಲಿ ಕರ ವಸೂಲಿಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನಾಗೇಂದ್ರಪ್ಪ ಸಂಗಣ್ಣ ಇಟಗಿ ಎಂಬುವವರು ಗ್ರೇಡ್-೨ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿರುವ ಕಾರಣ, ಆ ಸ್ಥಾನ ಒಂದು ವರ್ಷದಿಂದ ಖಾಲಿ ಇದೆ.ಈಗ ಈ ಹುದ್ದೆಗೆ ಪಂಪ್ ಆಪರೇಟರ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಪೈಕಿ ಜೇಷ್ಠತೆ ಹೊಂದಿರುವವರನ್ನು ನೇಮಕಾತಿ ಮಾಡಿಕೊಳ್ಳಲು ಸರಕಾರದ ನಿಯಮಾವಳಿ ಇದ್ದರೂ ಸಹಿತ ಇಲ್ಲಿಯವರೆಗ ಕ್ರಮಕೈಗೊಂಡಿಲ್ಲ.
ಅಲ್ಲದೇ ಈ ಬಗ್ಗೆ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದಿಂದ ಅನಿರ್ದಿಷ್ಟ ಧರಣಿ ಮಾಡಿದರೂ ಕಾರ್ಯಗತಗೊಂಡಿಲ್ಲ.ಆದ್ದರಿಂದ ಒಂದು ವಾರದ ಒಳಗಾಗಿ ಸರಕಾರದ ನಿಯಮಾವಳಿಯಂತೆ ಜೇಷ್ಠತೆ ಆಧಾರದ ಮೇಲೆ ದುಂಡಪ್ಪ ಶಿವಶರಣಪ್ಪ ಸಿಬ್ಬಂದಿಯನ್ನು ಕರವಸೂಲಿಗಾರ ಹುದ್ದೆಗೆ ಪದೋನ್ನತಿ ನೀಡಬೇಕು. ತೊನಸನಹಳ್ಳಿ(ಎಸ್) ಗ್ರಾಪಂ ಸಹಾಯಕ ಬಿಲ್ ಕಲೆಕ್ಟರ್ ಆಗಿ ನೇಮಕಾತಿ ಹೊಂದಿದ್ದು, ಅದನ್ನು ರದ್ದುಪಡಿಸಬೇಕು. ಅಲ್ಲದೇ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಬೆಳ್ಳಪ್ಪ ಖಣದಾಳ,ಶ್ರೀಕಾಂತ ನಾಗಪ್ಪ, ಡಿ.ಸಿ.ಹೊಸಮನಿ,ಕೃಷ್ಣಪ್ಪ ಕರಣಿಕ್, ರವಿಕುಮಾರ ಸಣತಮ್, ಶರಣಪ್ಪ ದೊಡ್ಡಮನಿ,ವಿಶ್ವರಾಜ ಫೀರೋಜಾಬಾದ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…