ಬಿಸಿ ಬಿಸಿ ಸುದ್ದಿ

ಬಬಲೇಶ್ವರ ಸರ್ಕಾರಿ ಶಾಲೆಯಲ್ಲಿ ಪಾಲಕರ ಸಭೆ

ಆಳಂದ: ತಾಲೂಕಿನ ಖಜೂರಿ ವಲಯದ ಬಬಲೇಶ್ವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೦-೨೧ನೇ ಸಾಲಿನ ಎಸ್‌ಡಿಎಂಸಿ ಹಾಗೂ ಪಾಲಕ-ಪೋಷಕರ ಸಭೆ ನಡೆಯಿತು.

ಸಭೆಯಲ್ಲಿ ಗ್ರಾಪಂ ಸದಸ್ಯ ಮಹಾದೇವ ಕಾಂಬಳೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ ಸುಧಾರಣೆಗೆ ಸಂಬಂಧಿತ ವಿಷಯಗಳನ್ನು ಪ್ರಸ್ತಾಪಿಸಿದರು. ಸರ್ಕಾರದಿಂದ ಹಾಗೂ ಗ್ರಾಪಂನಿಂದ ಶಾಲೆಗೆ ಬರುವ ಸೌಲಭ್ಯಗಳನ್ನು ಶಾಲೆಯವರು ಪಡೆದು ಮಕ್ಕಳಿಗೆ ವಿತರಿಸಬೇಕು. ಉತ್ತಮವಾಗಿ ಬಿಸಿಯೂಟವನ್ನು ನಿರ್ವಹಿಸಬೇಕು. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಹೇಳಿದರು.

ಪ್ರಮುಖ ಬಾಬುರಾವ್ ಸುರವಾಸೆ, ಸಿದ್ಧಪ್ಪ ಸುರವಾಸೆ, ನೀಲಪ್ಪಗೌಡ ಪಾಟೀಲ, ಶ್ರೀಶೈಲ ಗೋಧೆ, ಬಸವರಾಜ ಗೋಧೆ, ಸೋಮಯ್ಯ ಸ್ವಾಮಿ ಮತ್ತು ನಿಜಲಿಂಗಪ್ಪ ಕಾಂಬಳೆ, ಗುಂಡಪ್ಪ ಖಂಡಡಾಳೆ ಮತ್ತು ಶಾಲೆಯ ಮುಖ್ಯ ಶಿಕ್ಷಕ ದತ್ತು ಪೂಜಾರಿ, ಎಸ್‌ಡಿಎಂಸಿ ಉಪಾಧ್ಯಕ್ಷ ಮಹಾನಂದ ಕಾಂಬಳೆ, ಸದಸ್ಯ ನಿಜಲಿಂಗಪ್ಪ ಗೋಧೆ, ಶಾಂತಯ್ಯ ಸ್ವಾಮಿ, ನೀಲಪ್ಪ ಕಾಂಬಳೆ ಹಾಗೂ ವಿದ್ಯಾರ್ಥಿಗಳ ಪಾಲಕ, ಪೋಷಕರು ಶಾಲೆಯ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

ಶಿಕ್ಷಕ ಶಿವರಾಜ ಸ್ವಾಗತಿಸಿದರು. ಶಿಕ್ಷಕ ಶ್ರೀಶೈಲ ನಿರೂಪಿಸಿದರು. ಗ್ರಾಪಂ ಸದಸ್ಯ ರಿಜ್ವಾನ ಶೇಖ ವಂದಿಸಿದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

29 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

31 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

36 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

40 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

41 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago