ಆಳಂದ: ತಾಲೂಕಿನ ಕುಡಕಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳಿಗೆ ಒತ್ತಾಯಿಸಿ ನ.೨ರಂದು ಹೋಬಳಿ ಕೇಂದ್ರ ನಿಂಬರಗಾ ಗ್ರಾಮದ ಬಸ್ ನಿಲ್ದಾಣ ಮುಂದೆ ರಸ್ತೆ ತಡೆ ಚಳವಳಿ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೆ ಆರ್. ಕುಡಕಿ ಅವರು ತಿಳಿಸಿದ್ದಾರೆ.
ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ತಾಲೂಕಿನ ಅತ್ಯಂತ ಚಿಕ್ಕ ಹಾಗೂ ಗಡಿ ಗ್ರಾಮವಾದ ಕುಡಕಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಮೂಲಸೌಲಭ್ಯಗಳಿಲ್ಲದೆ ಸಾರ್ವಜನಿಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಗ್ರಾಮಕ್ಕೆ ಜನ ಪ್ರತಿನಿಧಿಗಳು ನಿರ್ಲಕ್ಷ್ಯಿಸಿದ್ದಾರೆ. ಶಾಸಕ ಸುಭಾಷ ಗುತ್ತೇದಾರ ಅವರು ಅಧಿಕಾರಕ್ಕೆ ಬಂದು ೪೨ ತಿಂಗಳಾದರು ಗ್ರಾಮಕ್ಕೆ ಒಮ್ಮೆಯೂ ಭೇಟಿ ನೀಡಿ ಸಮಸ್ಯೆ ಆಲಿಸಿಲ್ಲ. ಅಭಿವೃದ್ಧಿ ಕೆಲಸಕ್ಕೆ ಅನುದಾನವೂ ಕೊಡದೆ ಮಲತಾಯಿ ದೋರಣೆ ಅನುಸರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕುಡಕಿ ಗ್ರಾಮದಿಂದ ಜಿಲ್ಲಾ ಕೇಂದ್ರ ಕಲಬುರಗಿಗೆ ಸಂಚರಿಸುವ ಸಾರಿಗೆ ಬಸ್‌ನ್ನು ಮಾರ್ಪಡು ಮಾಡಿ ವಸತಿ ಸಂಚಾರಕ್ಕೆ (ಎಬಿ) ಮಾಡಬೇಕು. ಗ್ರಾಮದಿಂದ ಹಿತ್ತಲಶಿರೂವರೆಗೆ ಹದಗೆಟ್ಟ ರಸ್ತೆಯನ್ನು ಡಾಂಬರಿಕರಣ ಕೈಗೊಳ್ಳಬೇಕು. ಕುಡಿಯುವ ನೀರಿನ ಗಂಭೀರ ಸಮಸ್ಯೆ ನಿವಾರಿಸಲು ಅಮರ್ಜಾ ನದಿಯಲ್ಲಿ ತೆರೆದ ಬಾವಿ ತೋಡಿ ಪೈಪಲೈನ್ ಮೂಲಕ ಮನೆಗಳಿಗೆ ನೀರು ಒದಗಿಸಬೇಕು.
ಗ್ರಾಮದಿಂದ ಗೌಡಗಾಂವ ರೈಲ್ವೆಸ್ಟೇಷನ್ ಹೋಗುವ ರಸ್ತೆಯ ಡಾಂಬರೀಕರಣ ರಸ್ತೆಯನ್ನಾಗಿಸಬೇಕು. ಕೋಗನೂರ ರಸ್ತೆ ಸಿಮೆಂಟ್ ರಸ್ತೆ ಕೈಗೊಳ್ಳಬೇಕು ಎಂಬ ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ನಿಂಬರಗಾ ಬಸ್ ನಿಲ್ದಾಣ ಮುಂಭಾಗದ ರಸ್ತೆಯನ್ನು ನ.೨ರಂದು ತಡೆದು ಪ್ರತಿಭಟನೆ ನಡೆಸಲಾಗುವುದು. ಈ ಹೋರಾಟದಲ್ಲಿ ಕರ್ನಾಟಕ ದಲಿತ ಸೇನೆಯ ರಾಜ್ಯಾಧ್ಯಕ್ಷ ಬಾಬುರಾವ್ ಅರುಣೋದಯ, ಉಪಾಧ್ಯಕ್ಷ ಆನಂದರಾಯ ಎಲ್ ಗಾಯಕವಾಡ ಮತ್ತಿತರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…