ಆಳಂದ: ತಾಲೂಕಿನ ಹಿತ್ತಲಶಿರೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸುಭಾಷ್ ಗುತ್ತೇದಾರ ಚಾಲನೆ ನೀಡಿದರು.
ಶುಕ್ರವಾರ ಗ್ರಾಮದಲ್ಲಿ ೧೦ ಲಕ್ಷ.ರೂ ವೆಚ್ಚದ ಸಿಸಿ ರಸ್ತೆ ಹಾಗೂ ೧೦ ಲಕ್ಷ. ರೂ ವೆಚ್ಚದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆವರಣ ಗೋಡೆಯ ಕಾಮಗಾರಿಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದರು.
ಕೋವಿಡ್ ಸಂಕಷ್ಟ ಸಮಯದಲ್ಲಿಯೂ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತಾಲೂಕಿಗೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು. ಮುಖಂಡರಾದ ರಾಜಶೇಖರ ಮಲಶೆಟ್ಟಿ, ಮುಖಂಡ ಮಹಿಬೂಬ್ ಆಳಂದ, ತಾಪಂ ಮಾಜಿ ಸದಸ್ಯ ಪ್ರಭು ಸಜ್ಜನ್, ಲೋಕೋಪಯೋಗಿ ಎಇಇ ಅರುಣಕುಮಾರ, ನಿಂಬರ್ಗಾ ಪಿಎಸ್ಐ ಸುವರ್ಣ ಮಲಶೆಟ್ಟಿ, ವಿಜಯಕುಮಾರ್ ಕೊಣೆ, ಶರಣು ಸರಸಂಬಿ, ಗುರು ಪಾಟೀಲ್, ಶಾಲೆಯ ಮುಖ್ಯ ಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.