ಆಳಂದ: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪುನೀತ ರಾಜಕುಮಾರ ಅಕಾಲಿಕ ನಿಧನಕ್ಕೆ ಶಾಸಕ ಸುಭಾಷ್ ಗುತ್ತೇದಾರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪುನೀತ ರಾಜಕುಮಾರ ಬಹುಮುಖ ಪ್ರತಿಭೆಯ ಕಲಾವಿದರಾಗಿದ್ದು, ಚಿಕ್ಕ ವಯಸ್ಸಿನಿಂದಲೇ ಕಲಾರಂಗದಲ್ಲಿ ಗುರುತಿಸಿಕೊಂಡಿದ್ದರು. ಒಳ್ಳೆಯ ಸಾಮಾಜಿಕ ಸಂದೇಶಗಳನ್ನು ನೀಡುವ ಚಿತ್ರಗಳಲ್ಲಿ ಅಭಿನಯಿಸಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುತ್ತಿದ್ದರು ಅಲ್ಲದೇ ತಮ್ಮ ಕುಟುಂಬದ ಜೊತೆ ಆತ್ಮೀಯ ಒಡನಾಟ ಹೊಂದಿದ್ದರು ಹೀಗಾಗಿ ಅವರು ಇನ್ನಿಲ್ಲ ಎಂಬ ಸಂಗತಿ ಕೇಳಿ ದಿಗ್ಭ್ರಾಂತನಾಗಿದ್ದೇನೆ ಎಂದು ಸಂತಾಪ ಸೂಚಕದಲ್ಲಿ ಪತ್ರದಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ, ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್. ಕೊರಳ್ಳಿ, ತಾಲೂಕು ಅಧ್ಯಕ್ಷ ನಾಗರಾಜ ಘೋಡಕೆ, ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ಕರ್ನಾಡು ವಿಜಯ ಸೇನೆಯ ತಾಲೂಕು ಅಧ್ಯಕ್ಷ ಗುರು ಬಂಗರಗಿ, ಕನಸೇ ಅಧ್ಯಕ್ಷ ಮಹೇಶ ಹಿರೋಳ್ಳಿ, ಹೋರಾಟಗಾರ ಗಂಗಾಧರ ಕುಂಬಾರ ಖಜೂರಿ, ಕನಸೇ ಜಿಲ್ಲಾ ಅಧ್ಯಕ್ಷ ರಮೇಶ ಜಗತಿ, ನವ ಕರ್ನಾಟಕ ಸ್ವಾಭಿಮಾನಿ ವೇದಿಕೆ ಅಧ್ಯಕ್ಷ ಬೀರಣ್ಣಾ ಎಸ್. ಭೂಸನೂರ, ಕರುನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಅಭಿಷೇಕ ಪಾಟೀಲ, ಕರವೇ ಮುಖಂಡ ಮಹಾಂತೇಶ ಸಣ್ಣಮನಿ, ವಕ್ತಾರ ದವಲಪ್ಪ ವಣದೆ, ಪ್ರಭು ಪಾಟೀಲ ಮತ್ತಿತರ ನಟನ ಅಗಲಿಕೆಗೆ ಶೋಕವ್ಯಕ್ತಪಡಿಸಿ ಕನ್ನಡದ ಕಲಾವಿದ ಪುನೀತ ರಾಜಕುಮಾರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿ ಕನ್ನಡದ ಅತ್ಯುತ್ತಮ ಕಲಾವಿದನನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…