ಮಹಾನಗರ ಪಾಲಿಕೆ: ವಿವಿಧ ಯೋಜನೆಗಳಡಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

0
87

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಿಂದ ಎಸ್.ಎಫ್.ಸಿ. ಅನುದಾನದ ಶೇ. 24.10 ಯೋಜನೆಯಡಿ ನಿಗದಿಪಡಿಸಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಎಸ್.ಸಿ.ಪಿ., ಟಿ.ಎಸ್.ಪಿ. ಅನುದಾನದಡಿ ವಿವಿಧ ತರಬೇತಿ ಹಾಗೂ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಮೂರು ತಿಂಗಳ ಅವಧಿಯ ಸ್ಪೋಕನ್ ಇಂಗ್ಲೀಷ ಮತ್ತು ಕಂಪ್ಯೂಟರ್ ಟ್ಯಾಲಿ ತರಬೇತಿ ಹಾಗೂ ಒಂದು ತಿಂಗಳ ಅವಧಿಯ ಲಘು ಮತ್ತು ಭಾರಿ ವಾಹನ ತರಬೇತಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವ್ಯಾಸಂಗ ಪ್ರಮಾಣಪತ್ರ, ಜಾತಿ, ಆದಾಯ ಪ್ರಮಾಣಪತ್ರ, ಪಡಿತರ ಚೀಟಿ ಹಾಗೂ ಆಧಾರ ಕಾರ್ಡ್/ ಗುರುತಿನ ಚೀಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.

ಅದೇ ರೀತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಬ್ಯಾಂಡ್ ಸೆಟ್ ನೀಡಲು ಕಡ್ಡಾಯವಾಗಿ ಬ್ಯಾಂಡ್ ಸಂಘದ ನೋಂದಣಿ ಪತ್ರ, ಗುಂಪಿನ ೭ ಭಾವಚಿತ್ರಗಳು, ಜಾತಿ, ಆದಾಯ ಪ್ರಮಾಣಪತ್ರ, ಪಡಿತರ ಚೀಟಿ, ಆಧಾರ ಕಾರ್ಡ್/ ಗುರುತಿನ ಚೀಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಕಲಬುರಗಿ ಮಹಾನಗರಪಾಲಿಕೆಯ ಕಚೇರಿಯಲ್ಲಿ 2019ರ ಜುಲೈ 29 ರೊಳಗಾಗಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಶೇ 24.10 ಶಾಖೆಯ ವ್ಯವಸ್ಥಾಪಕರನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here