ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ 150 ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿಯನ್ನು ನ್ಯಾಯಾಲಯದ ವೆಬ್‍ಸೈಟ್ https://karnatakajudiciary.kar.nic.in/recruitment.php ಆನ್‍ಲೈನ್ ಮೂಲಕ ನವೆಂಬರ್ 27 ರೊಳಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜಾನ, ಕಲೆ, ವಾಣಿಜ್ಯ ನಿರ್ವಹಣೆ (Business Management) ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯಗಳ ಪದವಿಯಲ್ಲಿ ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಕನಿಷ್ಟ ಶೇಕಡ 55 ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದಜರ್ರ ಬೆರಳಚ್ಚು ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು ಹಾಗೂ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಥವಾ ಇತರೆ ಹಿಂದುಳಿದ ಜಾತಿಗಳ ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳ ವಯೋಮಿತಿ 38 ವರ್ಷ ಮೀರಿರಬಾರದು. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ವಯಸ್ಸು ಮೀರಿರಬಾರದು.