ಶಹಾಬಾದ:ನಗರಸಭೆಯ ವ್ಯಾಪ್ತಿಯ ಹನುಮಾನ ನಗರ ನಿವಾಸಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ನಗರಸಭೆಯ ವ್ಯವಸ್ಥಾಪಕ ಶರಣಗೌಡ ಪಾಟೀಲ ಮುಖಾಂತರ ನಗರಸಭೆಯ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.
ನಗರದ ಮಧ್ಯಭಾಗದಲ್ಲಿರುವ ಹನುಮಾನ ನಗರದ ಬಡಾವಣೆಯಲ್ಲಿ ಬೀದಿದೀಪಗಳ ಸಮಸ್ಯೆ, ಚರಂಡಿ ಸಮಸ್ಯೆ, ಶೌಚಾಲಯದ ಹಾಗೂ ರಸ್ತೆ ಸಮಸ್ಯೆಗಳು ಕಾಡುತ್ತಿವೆ.ಇಲ್ಲಿನ ಜನರಿಗೆ ಸಾಮೂಹಿಕ ಶೌಚಾಲಯ ನಿರ್ಮಿಸದಿರುವುದರಿಂದ ಇಲ್ಲಿನ ಜನರು ಬಹಿರ್ದೆಸೆಗೆ ಹೋಗಬೇಕಾದ ಪರಿಸ್ಥಿತಿ ಇದೆ. ನಡೆದಾಡಲು ರಸ್ತೆಯಿಲ್ಲ. ಚರಂಡಿಯೂ ನಿರ್ಮಿಸಿಲ್ಲ. ಬೀದಿ ದೀಪಗಳ ನಿರ್ವಹಣೆ ಹಾಗೂ ಕೊಳವೆ ಬಾವಿಯ ದುರಸ್ತಿ ಮಾಡದೇ ನಿರ್ಲಕ್ಷ್ಯ ಮಾಡಲಾಗುತ್ತಿದೆ.ಆದ್ದರಿಂದ ಕೂಡಲೇ ಈ ಎಲ್ಲಾ ಸಮಸ್ಯೆಗಳನ್ನು ಬಗಹರಿಸುವ ಮೂಲಕ ಇಲ್ಲಿನ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಹಾದೇವಿ.ಜಿ.ಮಾನೆ, ಸರಿತಾ ಶರಣಪ್ಪ, ರಾಧಿಕಾ, ಶಿಲ್ಪಾ, ಮಹಾದೇವಿ ಅತನೂರ ಸೇರಿದಂತೆ ಬಡಾವಣೆಯ ಅನೇಕ ಮಹಿಳೆಯರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…