ಬಿಸಿ ಬಿಸಿ ಸುದ್ದಿ

ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ: ಆನ್‌ಲೈನ್ ಅರ್ಜಿ ಆಹ್ವಾನ

ಕಲಬುರಗಿ: ಈಗಾಗಲೇ ಅಂಗವೈಕಲ್ಯತೆಯ ಗುರುತಿನ ಚೀಟಿ ಪಡೆದವರು ಹಾಗೂ ಪಡೆಯದೇ ಇರುವ ಕಲಬುರಗಿ ಜಿಲ್ಲೆಯ ಎಲ್ಲ ವಿಕಲಚೇತನರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ. ಕಾರ್ಡ್) ಪಡೆಯಬಹುದಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ವಿಕಲಚೇತನರು ಯು.ಡಿ.ಐ.ಡಿ. ಕಾರ್ಡ್ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು(ವಿ.ಆರ್.ಡಬ್ಲ್ಯೂ), ತಾಲೂಕು ಪಂಚಾಯಿತಿಯ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂ.ಆರ್.ಡಬ್ಲ್ಯೂ.) ಹಾಗೂ ನಗರ ಪ್ರದೇಶಗಳಲ್ಲಿನ ನಗರ ಪುನರ್ವಸತಿ ಕಾರ್ಯಕರ್ತರನ್ನು (ಯು.ಆರ್.ಡಬ್ಲ್ಯೂ.) ಸಂಪರ್ಕಿಸಿ ಪಡೆಯಬೇಕು. ಇದಲ್ಲದೇ ಕಲಬುರಗಿ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮೊಬೈಲ್ ಸಂಖ್ಯೆ9448281615, ಸಿದ್ದಣ್ಣ ಪಟ್ಟೇದಾರ್ ಮೊಬೈಲ್ ಸಂಖ್ಯೆ 9986115178 ಅವರನ್ನು ಸಂಪರ್ಕಿಸಬೇಕು.

ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-235222, ಅಂಗವಿಕಲರ ಮಾಹಿತಿ ಸಲಹೆಗಾರ ಪ್ರಕಾಶ ಜಾಧವ ಇವರನ್ನು ಮೊಬೈಲ್ ಸಂಖ್ಯೆ 9972563646ಗೆ ಸಂಪರ್ಕಿಸಬೇಕು. ಜಿಲ್ಲಾಧಿಕಾರಿಗಳ ಆದೇಶದಂತೆ ಕಲಬುರಗಿ ಜಿಲ್ಲೆಯ ಎಲ್ಲ ವಿ.ಆರ್.ಡಬ್ಲ್ಯೂ., ಎಂ.ಆರ್.ಡಬ್ಲ್ಯೂ ಹಾಗೂ ಯು.ಆರ್.ಡಬ್ಲ್ಯೂಗಳು ಹೆಚ್ಚಿನ ಕಾಳಜಿವಹಿಸಿ ವಿಕಲಚೇತನರ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ. ಕಾರ್ಡ್) ಪಡೆಯಲು ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago