ಭಾಲ್ಕಿ: ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ಅವರಿಂದ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ೨೦೨೧ ರ ನವೆಂಬರ್ ೪ ರಿಂದ ಒಂದು ತಿಂಗಳು ಪರ್ಯಂತ ಪ್ರತಿದಿನ ಬೆಳಿಗ್ಗೆ ೬-೩೦ ರಿಂದ ೭-೩೦ ರವರೆಗೆ ಆಧ್ಯಾತ್ಮಿಕ ಪ್ರವಚನ ಏರ್ಪಡಿಸಲಾಗಿದ್ದು, ಪೂರ್ವಭಾವಿಯಾಗಿ ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯಸನ್ನಿಧಾನದಲ್ಲಿ ಬಿತ್ತಿ ಪತ್ರ ಬಿಡುಗಡೆಗೊಳಿಸಲಾಯಿತು.
ವಿಜಯಪುರದ ಶ್ರೀ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ಸರ್ವಧರ್ಮ ದರ್ಶನಗಳ ಸಾರವನ್ನೆಲ್ಲ ಅರಗಿಸಿಕೊಂಡಿರುವ ಮಹಾನುಭಾವಿಗಳು ನಡೆ-ನುಡಿಗಳನ್ನು ಒಂದಾಗಿಸಿಕೊಂಡು ಆದರ್ಶ ಜೀವನ ನಡೆಸುವವರು. ಇಂತಹ ಪೂಜ್ಯರ ಆದ್ಯಾತ್ಮಿಕ ಪ್ರವಚನ ತಿಂಗಳ ಪರ್ಯಂತ ನಡೆಯಲಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಲು ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದರು. ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು, ಪೂಜ್ಯ ಶ್ರೀ ಮಹಾಲಿಂಗ ಸ್ವಾಮಿಗಳು ಉಪಸ್ಥಿತರಿದ್ದರು.
ಶರಣ ಸೋಮನಾಥಪ್ಪ ಅಷ್ಟೂರೆ, ಶರಣ ಸುಭಾಷ ಕಾರಾಮುಂಗೆ, ಶರಣ ಉಮಾಕಾಂತ ವಾರದ, ಶರಣ ಬಸವ ವಂಕೆ, ಶರಣ ಚನ್ನಬಸವಣ್ಣ ಬಳತೆ, ಶರಣ ಪ್ರಸನ್ನ ಖಂಡ್ರೆ, ಶರಣ ಸಾಗರ ಖಂಡ್ರೆ, ಶರಣ ಶಶಿಧರ ಕೋಸಂಬೆ, ಶರಣ ಸಾಗರ ಮಾಲಾನಿ, ಶರಣ ಗಣಪತಿ ಬೋಚರೆ, ಶರಣ ಬಂಡೆಪ್ಪ ಕಾರಾಮುಂಗೆ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…