ಬಿಸಿ ಬಿಸಿ ಸುದ್ದಿ

66ನೇ ಕನ್ನಡ ರಾಜ್ಯೋತ್ಸವಕ್ಕೆ ಗಣ್ಯರಿಂದ ಶುಭಾಶಯ

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಗಲಿಕೆಯ ಬೇಸರದಲ್ಲೇ ರಾಜ್ಯ ಸರ್ಕಾರ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತಿದ್ದು, 66ನೇ ಕನ್ನಡ ರಾಜ್ಯೋತ್ಸವಕ್ಕೆ ಎಲ್ಲ ಗಣ್ಯರು ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು , ‘ನಾಡಿನ ಸಮಸ್ತ ಜನತೆಗೆ ೬೬ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು , ‘ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು, ನುಡಿ, ಜನಪದ, ಇತಿಹಾಸ, ಪರಂಪರೆ, ಸಂಸ್ಕೃತಿಗಳನ್ನು ಉಳಿಸುವ, ಬೆಳೆಸುವ ದೃಢ ಸಂಕಲ್ಪ ನಮ್ಮದಾಗಿರಲಿ. ಸಮೃದ್ಧ, ಆರೋಗ್ಯಪೂರ್ಣ, ಪ್ರಗತಿಶೀಲ ನವಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ’ ಎಂದು ಕೂ ಮಾಡಿದ್ದಾರೆ.

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ , ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’ ಎಂದು ಶುಭ ಕೋರಿದ್ದಾರೆ. ಸಂಸದ ಬಿ ವೈ ರಾಘವೇಂದ್ರ , ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಏಕೀಕರಣ ಚಳುವಳಿಯ ಮೂಲಕ ಹಲವು ಪ್ರಾಂತ್ಯಗಳಲ್ಲಿ ಚದುರಿ ಹೋಗಿದ್ದ ನಾಡನ್ನು ಅಖಂಡ ಕರ್ನಾಟಕವಾಗಿ ರೂಪುಗೊಳಿಸಿದ ಶ್ರೇಷ್ಠ ದಿನ. ಸಮಸ್ತ ಕನ್ನಡಿಗರ ಅಸ್ಮಿತೆ, ಸ್ವಾಭಿಮಾನದ ಪ್ರತೀಕವಾದ ದಿನ.ಕನ್ನಡ ಉಳಿಸೋಣ, ಕನ್ನಡ ಬೆಳೆಸೋಣ – ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ! ಜೈ ಭುವನೇಶ್ವರಿ !’ ಎಂದಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ, ‘ಕರ್ನಾಟಕದ ಸಮಸ್ತ ಜನತೆಗೆ ೬೬ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನುಡಿ ಕನ್ನಡ, ನಡೆ ಕನ್ನಡ, ತನು ಕನ್ನಡ, ಮನ ಕನ್ನಡ ಎನ್ನುವಂತೆ ಕನ್ನಡವೇ ನಮ್ಮ ಉಸಿರಾಗಿರಲಿ. ನಾಡು, ನುಡಿ, ಸಂಸ್ಕೃತಿಯ ರಕ್ಷಣೆಗೆ ಪಣ ತೊಡೋಣ. ನಮ್ಮ ತಾಯ್ನಡಿ, ನಮ್ಮ ಹೆಮ್ಮೆ, ನಮ್ಮ ಅಭಿಮಾನ, ನಮ್ಮ ಅಸ್ಮಿತೆ. ಸಿರಿಗನ್ನಡಂ ಗೆಲ್ಗೆ!’ ಎಂದು ಕೂ ಮಾಡಿದ್ದಾರೆ.

ಶಿರಾ ಶಾಸಕ ಸಿ.ಎಂ ರಾಜೇಶ್ ಗೌಡ, ‘ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ಉಳಿಸೋಣ, ಕನ್ನಡ ಬೆಳೆಸೋಣ – ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ! ಜೈ ಭುವನೇಶ್ವರಿ !’ ಎಂದು ಶುಭ ಕೋರಿದ್ದಾರೆ.

ನಟ ಚೇತನ್, ಪುನೀತ್ ರಾಜಕುಮಾರ್ ಅವರು ಡಾ. ರಾಜ್ ಕುಮಾರ್ ಅವರೊಂದಿಗೆ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ಕಾರ್ಟೂನ್ ಹಂಚಿಕೊಂಡು ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

2 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

13 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

13 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

15 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

15 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

15 hours ago