ಕೋಲಾರ: ಜಿಲ್ಲೆ ಮತ್ತು ತಾಲ್ಲೂಕಿನ ನರಸಾಪುರ ಗ್ರಾಮದ ವ್ಯಾಲಿ ಪಬ್ಲಿಕ್ ಶಾಲೆಯಲ್ಲಿ 66 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕನ್ನಡ ನಾಡು ವಿವಿಧ ಧರ್ಮಗಳ ಮತ್ತು ಸಂಸ್ಕೃತಿಗಳ ತವರೂರಾಗಿದ್ದು ಸಾಮರಸ್ಯ ಮತ್ತು ಸಹಬಾಳ್ವೆ ಕನ್ನಡ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಶಿಕ್ಷಕರಾದ ಮುರಳಿ.ಆರ್ ರವರು ತಿಳಿಸಿದರು.
ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ ನೆಲೆಯಾಗಿದೆ. ಕನ್ನಡವೆಂದರೆ ಬರಿ ನುಡಿಯಲ್ಲ ಅದು ಜೀವನದ ಅರ್ಥ ಎಂಬ ಕವಿವಾಣಿಯಂತೆ ಇಲ್ಲಿನ ಭಾಷೆ, ಪರಂಪರೆ, ಕಲೆ ಮತ್ತು ಸಾಹಿತ್ಯ ಸಂಸ್ಕೃತಿಗಳೆಲ್ಲವೂ ಕನ್ನಡಮಯವೇ ಎಂದು ಕನ್ನಡ ಶಿಕ್ಷಕಿ ರಶ್ಮಿ.ಬಿ.ಸಿ. ರವರು ತಿಳಿಸಿದರು.
ಕರುನಾಡಿನಲ್ಲಿ ಆಳಿದ ನೂರಾರು ರಾಜಮನೆತನಗಳು, ಕನ್ನಡ ನಾಡಿನ ಶಿಲ್ಪ, ಸಂಗೀತ, ನೃತ್ಯ, ನಾಟಕ, ಸಾಹಿತ್ಯ ಪರಂಪರೆಗಳನ್ನು ಪೋಷಿಸಿವೆ. ನಾಡಿನ ಪ್ರತಿಯೊಬ್ಬ ಪ್ರಜೆಯೂ ಭಾವೈಕತೆ, ನಾಡಪ್ರೇಮ ಮತ್ತು ದೇಶಪ್ರೇಮವನ್ನು ಹೊಂದಿ ಈ ನಾಡಿನ ಸಮಗ್ರ ಅಭಿವೃದ್ಧಿಗೆ ತಮ್ಮ ಸಮಯವನ್ನು ಮೀಸಲಿಡಲು ಶ್ರಮಿಸಬೇಕು ಎಂದು ಶಿಕ್ಷಕಿ ನೂರ್ ಆಯೇಷಾ ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಸಂಸ್ಥಾಪಕರಾದ, ಜಿ.ಗೋಪಾಲರೆಡ್ಡಿ, ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಶಿಕ್ಷಕಿ ಜಿ. ಸುಮ, ಶಿಕ್ಷಕರಾದ ನೇತ್ರಾವತಿ.ಸಿ.ವಿ, ಗೋಪಾಲಕೃಷ್ಣ, ಜ್ಯೋತಿ, ರೇಖಾ, ಶಿಲ್ಪ, ಸಿಂಧು, ಆಶಾ, ಉಷಾ, ಅನಿತ, ಯಶೋಧ, ಲಕ್ಷ್ಮೀದೇವಿ, ಗಿರಿಜಾ, ನದಿಯ, ಇರ್ಪಾನ, ನಿಖತ್, ಸುಮಯ, ಜಯಂತಿ, ಹರಿಕೃಷ್ಣನ್, ಫಸಿಹ, ತಸ್ಪಿಯ, ಶಾಹೀನ ಹಾಗೂ ಹಳೆಯ ವಿದ್ಯಾರ್ಥಿಗಳಾದ ರಂಜಿತ್, ವಿನಯ್ ಹಾಗೂ ಎಲ್ಲಾ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.