ರಾಯಚೂರು : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಪ್ರಸಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತಿ ಮಿಟ್ಟಿ ಸಲ್ಲಾಪುರ ಸೇರಿ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ರಾಯಚೂರು ತಾಲೂಕಿನ ಮಿಟ್ಟಿ ಮಲ್ಕಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮನೆ ಮನೆಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಸಿದರು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಜನ್ ಆರ್, ಎ. ರವರು ಮಾತನಾಡಿ ಈ ಹಿಂದೆ ಜನ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ನ್ಯಾಯಾಲಯಕ್ಕೆ ಬರುತ್ತಿದ್ದರು ಆದರೆ ಈಗ ನ್ಯಾಯಾಲಯದ ಪ್ರತಿನಿಧಿಗಳಾಗಿ ನಾವು ನಿಮ್ಮ ವ್ಯಾಜ್ಯಗಳನ್ನು ಪರಿಹರಿಸಲು ಹಾಗೂ ಅದಕ್ಕೆ ಬೇಕಾದ ಸೂಕ್ತ ಅರಿವು ಮತ್ತು ನೆರವನ್ನು ನೀಡಲು ನಿಮ್ಮ ಗ್ರಾಮದ ಮನೆ ಬಾಗಿಲಿಗೆ ಬಂದಿದ್ದೇವೆ. ಅದನ್ನು ತಿಳಿದುಕೊಂಡು ನೀವು ಕಾನೂನು ಸೇವಾ ಪ್ರಾಧಿಕಾರದಿಂದ ಇರುವ ಉಚಿತ ಸೇವೆಗಳನ್ನು ಸಾರ್ವಜನಿಕರು ಪಡೆದುಕೊಳ್ಳಲು ಮುಂದಾಗಬೇಕು ಜೊತೆಗೆ ಕಾನೂನಿನ ಯಾವುದೇ ರೀತಿಯ ನೆರವು ಬೇಕಿದ್ದರೆ ಹಾಗೂ ನಿಮ್ಮಗೆ ಏನೇ ಕಾನೂನಾತ್ಮಕ ಮತ್ತು ಸಾರ್ವಜನಿಕ ಸಮಸ್ಯೆಗಳಿದ್ದರೆ ನಮ್ಮ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತಂದರೆ ಆರ್ಹರಿಗೆ ಉಚಿತವಾದ ಕಾನೂನಿನ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.
ನಂತರ ಕಾನೂನು ಸೇವಾ ಪ್ರಾಧಿಕಾರದ ಸೇವೆಗಳನ್ನು ಕುರಿತಂತೆ ಮಾಹಿತಿಗಳನ್ನು ಒಳಗೊಂಡ ಕರಪತ್ರಗಳನ್ನು ಗ್ರಾಮದಲ್ಲಿರುವ ಮನೆ ಮನೆಗೆ ತೆರಳಿ ಹಂಚಿ ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಪ್ರಾಧನ ಕಾರ್ಯದರ್ಶಿಯಾದ ಶಿವಕುಮಾರ ನಾಯಕ ದಿನ್ನಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ವೀರನಗೌಡ, ಸಿಡಿಪಿಒ ರಾಮಕೃಷ್ಣ, ಜಿಲ್ಲಾ ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಜಗದೀಶ್ ಹಿರೇಮಠ, ವಕೀಲರಾದ ಸುರೇಶಬಾಬು ರಾಂಪುರ್, ಶಿವಕುಮಾರ ಮ್ಯಾಗಳಮನಿ, ಮುದುಕ್ಕಣ್ಣ ನಾಯಕ, ತಾಲೂಕು ಪಂಚಾಯತಿ ಸಹಾಯಕರಾದ ರಾಜಗೋಪಾಲ ಪುರೋಹಿತ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಇದ್ದರು.