ಕಲಬುರಗಿ: ನಗರದ ಸರದಾರ ವಲ್ಲಭಭಾಯಿ ಪಟೇಲ ವೃತ್ತದಲ್ಲಿ ಜೈ ಕನ್ನಡಿಗರ ಸೇನೆಯ ನೆತೃತ್ವದಲ್ಲಿ ಆಯೋಜಿಸಿದ್ದ ತಾಯಿ ಭುವನೇಶ್ವರಿ ದೇವಿಯ ಪೂಜೆ ಮತ್ತು ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶಾಸಕ ದತ್ತಾತ್ರೇಯ ಸಿ.ಪಾಟೀಲ ರೇವೂರ ಚಾಲನೆ ನೀಡಿದರು.
ಮಾಜಿ ಎಂ.ಎಲ್.ಸಿ ಅಲ್ಲಮಪ್ರಭು ಪಾಟೀಲ ನೆಲೋಗಿ, ಜೈಕನ್ನಡಿಗರ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಎಚ್.ಭಾಸಗಿ, ಅಮರನಾಥ ಪಾಟೀಲ, ಹೋರಾಟಗಾರ ಲಕ್ಷ್ಮಣ ದಸ್ತಿ, ಬೀಬಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಇದ್ದರು.