ಕಲಬುರಗಿ: ಕಲಬುರಗಿ ಭಾಗದ ರೈತರಿಗೆ ಡಿಸಿಸಿ ಬ್ಯಾಂಕನ ಅವಶ್ಯಕತೆ ತುಂಬಾ ಇದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ್ ಆರ್. ನಿರಾಣಿ ಅವರು ಅಭಿಪ್ರಾಯಪಟ್ಟರು.
ಸೋಮವಾರ ನಗರದ ಡಾ.ಎಸ್.ಎಮ್. ಪಂಡಿತ ರಂಗಮಂದಿರದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಕಲಬುರಗಿಯ ವತಿಯಿಂದ ಆಯೋಜಿಸಲಾಗಿದ್ದ ಮಿನಿ ಎಟಿಎಂ, ಸಾಲ ವಿತರಣೆ, ಸಾಲ ವಸೂಲಾತಿ ಕಾರ್ಯಾಗಾರ ಹಾಗೂ ಸಹಕಾರ ಸಪ್ತಾಹದ ಪೂರ್ವಸಿದ್ಧತೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡಿದರು.
ರೈತರ ಕ? ಕಾಲದಲ್ಲಿ ಸಹಕಾರವಾಗಲು ಡಿಸಿಸಿ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತವೆ. ಜಗತ್ತಿಗೆ ಬ್ಯಾಂಕಿಂಗ್ ಪರಿಕಲ್ಪನೆ ನೀಡಿದ ಹೆಮ್ಮೆ ಕರ್ನಾಟಕದ ಬ್ಯಾಂಕುಗಳಿಗೆ ಸಲ್ಲುತ್ತದೆ ಎಂದ ಅವರು, ರೈತ ದೇಶಕ್ಕೆ ಕೇವಲ ಅನ್ನ ನೀಡುವಾತ ಅಲ್ಲದೇ ದೇಶದ ಶಕ್ತಿದಾತನು ಆಗಿದ್ದಾನೆ. ಅಂತಹ ರೈತರ ಸಹಾಯಕ್ಕೆ ಸದಾ ಡಿಸಿಸಿ ಬ್ಯಾಂಕ್‌ಗಳು ಸ್ಪಂದಿಸಿಬೇಕು ಎಂದು ತಿಳಿಸಿದರು.
ಈ ಪ್ರದೇಶದಲ್ಲಿ ಒಂದು ಸಹ ಬೃಹತ್ ಕೈಗಾರಿಕಾ ಕಾರ್ಖಾನೆ ಇಲ್ಲದೆ ಇರುವುದು ನೋವಿನ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಕಲಬುರಗಿ ಜಿಲ್ಲೆಗೆ ಬೃಹತ್ ಕೈಗಾರಿಕೆಗಳ ಆಗಮನದಿಂದ ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ಸಿಗಲಿ ಎಂದರು. ವಿ?ನ್ -೨೦೫೦ ಮೂಲಕ ಮುಂದಿನ ೩೦ ವ?ಗಳಲ್ಲಿ ಕಲಬುರಗಿ ಜಿಲ್ಲೆಯೂ ಶಿಕ್ಷಣ, ಕೈಗಾರಿಕೆ, ಕೃಷಿ, ಮೂಲಸೌಕರ್ಯ, ಐಶಾರಾಮಿ ಹೊಟೇಲ್ ಉದ್ಯಮ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ರಂಗದಲ್ಲಿ ಮುಂಚೂಣಿಯಲ್ಲಿ ನಿಲ್ಲುವಂತೆ ಅವಿರತ ಪ್ರಯತ್ನ ಮಾಡುವುದಾಗಿ ಸಚಿವರು ತಿಳಿಸಿದರು.
ಕಲಬುರಗಿಯಲ್ಲಿ ಇಸ್ರೇಲ್ ಮಾದರಿಯ ತೋಟಗಾರಿಕೆ ಮಾಡಲು ತಜ್ಞರ ತಂಡ ಬಂದು ತರಬೇತಿ ನೀಡಲಿದೆ ಹಾಗೂ ವಿಮಾನ ತಯಾರಿಕಾ ಕಂಪನಿಯೊಂದಕ್ಕೆ ಕಲಬುರಗಿಯಲ್ಲಿ ವಿಮಾನ ಬಿಡಿ ಭಾಗ ತಯಾರಿಕೆ ಘಟಕ ಸ್ಥಾಪಿಸಲು ಅಹ್ವಾನ ನೀಡಲಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಮಾತನಾಡಿದ ಸೇಡಂ ಶಾಸಕ ಹಾಗೂ ಡಿಸಿಸಿ ಬ್ಯಾಂಕನ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ್, ನಮ್ಮ ಡಿಸಿಸಿ ಬ್ಯಾಂಕ್ ಇದುವರೆಗೂ ೧೭೬ ಕೋಟಿ ರೂಪಾಯಿಗಳ ಸಾಲ ರೈತರಿಗೆ ನೀಡಿದೆ. ಮುಂದಿನ ದಿನಗಳಲ್ಲಿ ೫ ಸಾವಿರ ಕೋಟಿ ವ್ಯವಹಾರ ಮಾಡುವ ಗುರಿ ಹೊಂದಿದ್ದು, ಸುಮಾರು ಒಂದು ಸಾವಿರ ಯುವಕರಿಗೆ ಉದ್ಯೋಗ ನೀಡುವ ಭರವಸೆ ಅವರು ನೀಡಿದರು.
ಡಿಸಿಸಿ ಬ್ಯಾಂಕ್ ಮೂಲಕ ಕ?ದಲ್ಲಿರುವ ರೈತರಿಗೆ ಬೆಂಬಲ ನೀಡಲಾಗುವುದು. ೨೧ನೇ ಸ್ಥಾನದಲ್ಲಿದ್ದ ನಮ್ಮ ಬ್ಯಾಂಕ್ ಈಗ ೧೧ನೇ ಸ್ಥಾನದಲ್ಲಿದೆ. ಮುಂಬರುವ ದಿನಗಳಲ್ಲಿ ಟಾಪ್ ೫ ಸ್ಥಾನದಲ್ಲಿ ತರುವ ಸರ್ವ ಪ್ರಯತ್ನ ಮಾಡಲಾಗುವುದು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನ ಅವಶ್ಯಕವಾಗಿದೆ ಎಂದು ಹೇಳಿದರು.
ಸಹಕಾರ ಸಂಘಗಳ ಅಪರ ನಿಬಂಧಕ ದಿವಾಕರ್ ಎ.ಸಿ ಅವರು ಕಾರ್ಯಗಾರದಲ್ಲಿ ಡಿಸಿಸಿ ಬ್ಯಾಂಕಿನ ಸಿಬ್ಬಂದಿಗಳಿಗೆ ವಿಶೇ? ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಆಳಂದ ಶಾಸಕ ಸುಭಾ? ಗುತ್ತೇದಾರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿ?ತ್ ಸದಸ್ಯ ಶಶೀಲ್ ನಮೋಶಿ, ಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಸುರೇಶ್ ಆರ್ ಸಜ್ಜನ್, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಶಿವಾನಂದ ಮಾನಕರ್ ಸೇರಿದಂತೆ ಕಲಬುರಗಿ, ಯಾದಗಿರಿ ಜಿಲ್ಲೆಯ ಎಲ್ಲಾ ಡಿಸಿಸಿ ಬ್ಯಾಂಕನ ನಿರ್ದೇಶಕರು ಹಾಗೂ ಪದಾಧಿಕಾರಿಗಳು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…