ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅಪ್ಪಾಜಿ ಪದ್ಮಭೂ?ಣ ಪ್ರಶಸ್ತಿಗೆ ಅರ್ಹರು : ನಿರಾಣಿ

0
40

ಕಲಬುರಗಿ: ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯನ್ನು ಗುರುತಿಸಿ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರು ಪದ್ಮಭೂ?ಣ ಪ್ರಶಸ್ತಿಗೆ ಅರ್ಹರು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.

ಸೋಮವಾರ ಕಲಬುರಗಿ ನಗರದ ಬಸವರಾಜಪ್ಪ ಅಪ್ಪ ಸ್ಮರಣಾರ್ಥ ಭವನದಲ್ಲಿ ಜಿಲ್ಲಾ ವೀರಶೈವ ಸಮಾಜದ ವತಿಯಿಂದ ನಡೆದ ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿಯಾಗಿ ಪಟ್ಟಾಭಿ?ಕಗೊಂಡಿರುವ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ೫ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪೂಜ್ಯ ಡಾ ಅಪ್ಪಾಜಿಯವರು ಶಿಕ್ಷಣ ಸಂಸ್ಥೆಗಳ ಸರಪಳಿಯನ್ನು ಪ್ರಾರಂಭಿಸಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.

Contact Your\'s Advertisement; 9902492681

ಪೂಜ್ಯ ಡಾ.ಅಪ್ಪಾಜಿಯವರು ದೂರದೃಷ್ಟಿಯುಳ್ಳ ಶಿಕ್ಷಣತಜ್ಞರಾಗಿದ್ದು, ೧೧೭ ವ?ಗಳ? ಹಳೆಯದಾದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವನ್ನು ಇಡೀ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಮುಖ ಶಿಕ್ಷಣ ನೀಡುವ ಸಂಸ್ಥೆಯಾಗಿ ಪರಿವರ್ತಿಸಿದ್ದಾರೆ ಮತ್ತು ಸಂಘ ಮತ್ತು ಶರಣಬಸವ ಶಿಕ್ಷಣ ಸಂಸ್ಥೆಗಳಿಂದ ಅನೇಕ ವಿದ್ಯಾವಂತರನ್ನು ಹೊರತರಲಾಗಿದೆ ಎಂದು ನಿರಾಣಿ ಹೇಳಿದರು. ಶರಣಬಸವ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದ ವಿಧ್ಯಾರ್ಥಿಗಳು ಪ್ರಪಂಚದಾದ್ಯಂತದ ಪ್ರತಿಷ್ಠಿತ ಕಂಪನಿಗಳಲ್ಲಿ ಪ್ರಮುಖ ಸ್ಥಾನಗಳನ್ನು ಆಕ್ರಮಿಸಿಕೊಂಡಿದ್ದಾರೆ, “ಇದು ಸಂಘವು ನಡೆಸುವ ಶಿಕ್ಷಣ ಸಂಸ್ಥೆಗಳು ನೀಡುವ ಶಿಕ್ಷಣದ ಗುಣಮಟ್ಟದ ಬಗ್ಗೆ ಹೇಳುತ್ತದೆ” ಎಂದರು.

ಸಂಘದಿಂದ ನಡೆಸಲ್ಪಡುತ್ತಿರುವ ಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಸುಮಾರು ೩೦ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಈ ಭಾಗದ ೧೦ ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ನೀಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಆದರೆ ರಾಜ್ಯದ ವಿವಿಧ ಭಾಗಗಳಲ್ಲಿರುವ ವೀರಶೈವ ಲಿಂಗಾಯತ ಮಠಗಳ ಕೊಡುಗೆಯಿಂದಾಗಿ, ಶೈಕ್ಷಣಿಕ ಸಬಲೀಕರಣವು ವಿಶೇ?ವಾಗಿ ಸಮಾಜದ ಬಡ ಮತ್ತು ತುಳಿತಕ್ಕೊಳಗಾದ ವರ್ಗಗಳಿಂದ ಬಂದವರ ಕನಸು ನನಸಾಗಿದೆ ಎಂದು ಶ್ರೀ ನಿರಾಣಿ ಹೇಳಿದರು. ಹುಟ್ಟುಹಬ್ಬದ ಉಡುಗೊರೆಯಾಗಿ ತಮ್ಮ ಸಹೋದರನನ್ನು ಹೊಗಳಿ ಅರ್ಥಪೂರ್ಣವಾದರೂ ಸುಮಧುರ ಗೀತೆಗಳನ್ನು ಹಾಡಿರುವ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಸಹೋದರಿಯರಾದ ಕುಮಾರಿ ಶಿವಾನಿ, ಕುಮಾರಿ ಭವಾನಿ, ಕುಮಾರಿ ಮಹೇಶ್ವರಿ ಅವರನ್ನು ಸಚಿವರು ಅಭಿನಂದಿಸಿದರು.

ಸಮಾರಂಭದ ನೇತೃತ್ವ ವಹಿಸಿದ್ದ ಆಂಧ್ರಪ್ರದೇಶದ ಶ್ರೀಶೈಲಂನ ಜಗದ್ಗುರು ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಸುಲಫಲ ಮಠ ಇವರು ಮಾತನಾಡುತ್ತಾ ಸಚಿವರ ಅಭಿಪ್ರಾಯಗಳನ್ನು ಅನುಮೋದಿಸಿ, ಡಾ.ಅಪ್ಪಾಜಿಯವರಿಗೆ ಪದ್ಮಭೂ?ಣ ಪ್ರಶಸ್ತಿ ಪ್ರದಾನ ಮಾಡಬೇಕೆಂಬ ಅವರ ಬಹುದಿನಗಳ ಮನವಿಗೆ ನಿರಾಣಿ ಅವರು ಬೆಂಬಲದ ಧ್ವನಿ ನೀಡುವುದರೊಂದಿಗೆ ಇದೀಗ ಮುನ್ನಡೆಗೆ ಬಂದಿದೆ ಎಂದರು. “ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಡಾ.ಅಪ್ಪಾಜಿಯವರಿಗೆ ಪದ್ಮಭೂ?ಣ ಪ್ರಶಸ್ತಿಯನ್ನು ನೀಡಲು ಸಚಿವ ಸಂಪುಟದ ಅನುಮೋದನೆಯನ್ನು ಪಡೆದುಕೊಳ್ಳುವ ಮೂಲಕ ಈಗಲೇ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಅದನ್ನು ತಕ್ಷಣವೇ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು” ಎಂದು ತಿಳಿಸಿದರು.

ಪೂಜ್ಯ ಡಾ.ಅಪ್ಪಾಜಿ ಮಾತನಾಡಿ, ತಮ್ಮ ಪುತ್ರ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಅವರ ೫ನೇ ಜನ್ಮದಿನದಂದು ಆಶೀರ್ವದಿಸಿದ ಸಚಿವರು ಹಾಗೂ ಸ್ವಾಮೀಜಿಗಳಿಗೆ ಕೃತಜ್ಞತೆ ಸಲ್ಲಿಸಿ, ಇ? ವ? ನನ್ನ ಜನ್ಮದಿನವನ್ನೂ ಇ? ಅದ್ಧೂರಿಯಾಗಿ ಆಚರಿಸಿರಲಿಲ್ಲ, ವಿವಿಧ ರಂಗಗಳ ಗಣ್ಯರು ಪಾಲ್ಗೊಂಡು ಆಶೀರ್ವದಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು.

ಬೀದರ್ ಜಿಲ್ಲೆಯ ಭಾಲ್ಕಿಯ ಸಂಸ್ಥಾನ ಹಿರೇಮಠದ ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿದರು. ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನೀಲಕುಮಾರ ಬಿಡವೆ ಹಾಗೂ ಗೋದುತಾಯಿ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ನೀಲಾಂಬಿಕಾ ಶೇರಿಕಾರ ಅವರು ಶರಣಬಸವೇಶ್ವರ ಸಂಸ್ಥಾನ ಹಾಗೂ ವಿದ್ಯಾವರ್ಧಕ ಸಂಘ ಸಮಾಜಕ್ಕೆ ನೀಡಿರುವ ಕೊಡುಗೆ ಕುರಿತು ವಿಶೇ? ಉಪನ್ಯಾಸ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ, ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮೂಡ, ಬಿ.ಜಿ ಪಾಟೀಲ, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ ಸ್ವಾಗತಿಸಿದರು. ಶ್ರೀಶೈಲ್ ಗೂಳಿ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here