ಬೀದರ: ಭ್ರಷ್ಟಾಚಾರ ಎಂಬುದು ಒಂದು ಸಾಮಾಜಿಕ ಪಿಡುಗು ಅದನ್ನು ತಡೆಗಟ್ಟಲು ಸಾರ್ವಜನಿಕರು ಕೈ ಜೊಡಿಸಬೇಕು ಎಂದು ರಾಜ್ಯ ಭ್ರಷ್ಟಾಚಾರ ನಿರ್ಮೂಲನ ದಳದ ರಾಜ್ಯಾಧ್ಯಕ್ಷ ಡಾ.ಎ.ಎಸ್.ಭದ್ರಶೆಟ್ಟಿ ಕರೆ ನೀಡಿದರು.
ಬೀದರ್ ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಭ್ರಷ್ಟಾಚಾರ ನಿರ್ಮೂಲನ ದಳದ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದಲ್ಲಿ ಇಂದು ಭ್ರಷ್ಟಾಚಾರ ತಾಂಡವವಾಡುತ್ತಿದೆ.
ರಾಜಕಾರಣಿಗಳ ಹಗರಣಗಳು,ಅಧಿಕಾರಿಗಳ ಲಂಚಗುಳಿತನ ಜನಸಾಮಾನ್ಯರಿಗೆ ತೊಂದರೆಯುಂಟು ಮಾಡುತ್ತಿದೆ.ಇವುಗಳ ಕಡಿವಾಣಕ್ಕೆ ಸಾರ್ವಜನಿಕರು ಮುಂದಾಗಬೇಕು.ಲಂಚ ನೀಡಲು ಜನರು ನಿರಾಕರಿಸಬೇಕು.ಈ ನಿಟ್ಟಿನಲ್ಲಿ ಭ್ರಷ್ಟಾಚಾರ ವಿರುದ್ಧ ರಾಜ್ಯ ಭ್ರಷ್ಟಾಚಾರ ನಿರ್ಮೂಲನ ದಳ ನಿರಂತರ ಹೋರಾಟ ಮಾಡುತ್ತಿದೆ ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಭ್ರಷ್ಟಾಚಾರ ನಿರ್ಮೂಲನ ದಳ ಕಾರ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಪ್ರತಿಯೊಂದು ಇಲಾಖೆಯಲ್ಲಿ ಇಂದು ಭ್ರಷ್ಟಾಚಾರ ಹೆಮ್ಮರವಾಗಿ ಬೆಳೆದಿದೆ.ಲಂಚ ನೀಡದಿದ್ದರೆ ಸಾರ್ವಜನಿಕರು ಕಚೇರಿಗಳಿಗೆ ಹತ್ತಾರು ಬಾರಿ ಅಲೆದಾಡಬೇಕಾಗುತ್ತದೆ.ಯುವ ಸಮೂಹ ಮನಸ್ಸು ಮಾಡಿದರೆ ಇದನ್ನು ಬೇರು ಸಮೇತ ಕಿತ್ತು ಹಾಕಬಹುದು.ಬ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದರೆ ವಿರೋಧಿಗಳ ಸಂಖ್ಯೆ ಹೆಚ್ಚಾಗುತ್ತದೆ.ಆದರೆ ಧೈರ್ಯದಿಂದ ಹೋರಾಟ ಮಾಡಬೇಕು ಎಂದು ಹೇಳಿದರು.
ಬೀದರ ಜಿಲ್ಲಾ ಘಟಕದ ಅಧ್ಯಕ್ಷ ನಾಮದೇವ ಶಿವಾಜಿ ಗುಂಪಾ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಘಟಕಗಳನ್ನು ರಚಿಸಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.ಜಿಲ್ಲಾ ಕಾರ್ಯದರ್ಶಿ ಅನಂತರೆಡ್ಡಿ ಬ.ಮಿರ್ಜಾಪೂರ ಸ್ವಾಗತಿಸಿ ಮಾತನಾಡಿದರು..ಮಂಜುನಾಥ ಸಿರಗಾಪೂರ, ಶಶಿಕಾಂತ ಪಾಟೀಲ್ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಬಸವರಾಜ ಮುಲಗೆ ನಿರೂಪಿಸಿದರು.ಬಕ್ಕಪ್ಪ ನಾಗೂರ,ಹಮ್ಮು ಪಾಜಿ, ಅಭಿಷೇಕ್,ಅನಿಲ ಸೋಲಂಕೆ, ದಿನೇಶ್, ಧನರಾಜ್ ರೆಡ್ಡಿ,ನರಸಿಂಗರಾಜ,ಪವನ ಪೂಲ,ಕಿರಣ ಡಿ.ಕೆ, ಶಿವಾಜಿ ದಾದಪೂರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…