ಬಿಸಿ ಬಿಸಿ ಸುದ್ದಿ

ನಿಂಬರಗಾದಲ್ಲಿ ಕುಡಕಿ ಗ್ರಾಮಸ್ಥರಿಂದ ಸೌಲಭ್ಯಕ್ಕಾಗಿ ಪ್ರತಿಭಟನೆ

ಆಳಂದ: ತಾಲೂಕಿನ ಹೋಬಳಿ ಕೇಂದ್ರ ನಿಂಬರಗಾ ಗ್ರಾಮದಲ್ಲಿ ಕುಡಕಿ ಗ್ರಾಮಕ್ಕೆ ಮೂಲಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕುಡಕಿ ಗ್ರಾಮ ಸುಧಾರಣ ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸಮೀತಿಯ ಮುಖಂಡರು ಮತ್ತು ಗ್ರಾಮಸ್ಥರು ಸೇರಿ ಮಂಗಳವಾರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಕುಡಕಿ ಗ್ರಾಮವೂ ತಾಲೂಕಿನ ಗಡಿ ಗ್ರಾಮವಾಗಿದ್ದರಿಂದ ಹಲವು ದಶಕಗಳಿಂದಲೂ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಮತ್ತು ಸಾರಿಗೆ ಬಸ್ ಸೌಲಭ್ಯದ ಸಮಸ್ಯೆ ನಿವಾರಣೆ ಆಗುತ್ತಿಲ್ಲ. ಈ ಕುರಿತು ಹಲವು ಬಾರಿ ಸಂಬಂಧಿತ ಅಧಿಕಾರಿಗಳಿಗೆ ಮತ್ತು ಜನ ಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೂ ಗ್ರಾಮಸ್ಥರ ಬೇಡಿಕೆಗೆ ಸ್ಪಂದನೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಡಕಿ ಸಂಪರ್ಕ ಒದಗಿಸುವ ಹಿತ್ತಲಶಿರೂರ, ಗೌಡಗಾಂವ, ಕೊಗನೂರ ರಸ್ತೆಗಳು ನಿರ್ಮಾಣ ಕೈಗೊಳ್ಳಬೇಕು. ಸಾರ್ವಜನಿಕ ಸ್ಮಶಾನ ಭೂಮಿ ಒದಗಿಸಬೇಕು. ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಅಮರ್ಜಾ ಹಳ್ಳಕ್ಕೆ ತೆರೆದ ಬಾವಿ ತೋಡಿ ನೀರು ಪೂರೈಕೆ ಕ್ರಮ ಕೈಗೊಳ್ಳಬೇಕು. ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಳಗಿನ ಜಾವ ೬:೩೦ಗಂಟೆಗೆ ಬಸ್‌ನ ವ್ಯವಸ್ಥೆ ಕಲ್ಪಿಸಬೇಕು. ದಲಿತರ ಸನ್ಮಾನ ಭೂಮಿಗೆ ಸಿಮೆಂಟ್ ರಸ್ತೆ ಕೈಗೊಳ್ಳಬೇಕು ಎಂಬ ಪ್ರಮುಖ ಬೇಡಿಕೆಯ ಮನವಿ ಸಲ್ಲಿಸಿದರು.

ಗ್ರಾಮ ಸುಧಾರಣ ಸಮಿತಿ ಗೌರವ ಅಧ್ಯಕ್ಷ ನರಸಿಂಗರಾವ್ ಮಾಲಿಪಾಟೀಲ, ಅಧ್ಯಕ್ಷ ಹಣಮಂತರಾವ್ ಎಲ್. ಹಳಕುಂದೆ, ಉಪಾಧ್ಯಕ್ಷ ದತ್ತಾತ್ರೆಯ ಆರ್. ಕುಡಕಿ, ಶಿವಣ್ಣಾ ಬುರಾಣಪೂರ, ಹಳ್ಳೆಪ್ಪ ತಳವಾರ, ಶಿವಯ್ಯ ಸ್ವಾಮಿ, ಶರಣಬಸಪ್ಪ ಮಾಲಿಪಾಟೀಲ, ಬೆಂಬಲವಾಗಿ ನಿಂಬರಗಾದ ವಿಠ್ಠಲ ಕೋಣೆಕರ್, ಸೂರ್ಯಕಾಂತ ಚಿಂಚನಸೂರ, ವೀರಣ್ಣಾ ನಾಗಶೆಟ್ಟಿ, ಶ್ರೀಮಂತ ವಾಗ್ದರಿ, ಗುರಣ್ಣಾ ಕಾಮನಗೊಳ, ರಾಜಶೇಖರ ಕರಣಾಕರ್, ಶರಣಬಸಪ್ಪ ನಿರ್ಮೂಲಕರ್, ಪ್ರಕಾಶ ಸರ್ವೋದಯ, ಚಂದ್ರಶಾ ತಳವಾರ, ದೇವಿಂದ್ರ ಬೆಳ್ಳೆ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಸ್ಥಳಕ್ಕೆ ತಾಪಂ ಇಒ ನಾಗಮೂರ್ತಿ ಕೆ. ಶೀಲವಂತ ಅವರು ಆಗಮಿಸಿ ಮನವಿ ಸ್ವೀಕರಿಸಿ ಬೇಡಿಕೆ ಈಡೇರಿಸಲು ಸಂಬಂಧಿತ ಇಲಾಖೆಗೆ ಸೂಚಿಸಲಾಗುವುದು. ಕುಡಕಿ ರೈಲು ನಿಲ್ದಾಣವರೆಗೆ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಎನ್‌ಇಕೆಆರ್‌ಟಿಸಿ ಅಧಿಕಾರಿಗಳು ಮನವಿ ಸ್ವೀಕರಿಸಿ ತಿಂಗಳ ಕಾಲಾವಕಾಶದೊಳಗೆ ಕಾಯಂ ಮುಖಾಂ ಬಸ್ ಸೌಲಭ್ಯ ಒದಗಿಸಲಾಗುವುದು. ಆಳಂದನಿಂದ ಕುಡಕಿ ಬಸ್ ಸಂಚಾರಕ್ಕೆ ೧೫ ದಿನಗಳಲ್ಲಿ ಆರಂಭಿಸಲಾಗುವುದು ಎಂದು ಬರವಸೆ ನೀಡಿದರು. ಪಿಡಬ್ಲೂಡಿ ಎಇಇ ಅರುಣಕುಮಾರ ಬಿರಾದಾರ, ಗ್ರಾಮೀಣ ನೀರು ಸರಬರಾಜು ಇಲಾಖೆ ಇಂಜಿನಿಯರ್ ಹಾಜರಿದ್ದು ವ್ಯಾಪ್ತಿಯ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಪಿಎಸ್‌ಐ ಸುವರ್ಣ ಮಲಶೆಟ್ಟಿ ಬಂದೋಬಸ್ತ್ ಒದಗಿಸಿದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

11 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

22 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

22 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 day ago