ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಂಭ್ರಮ

0
13

ಆಳಂದ: ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ದಾಖಲೆಯ ಅಂತರದಲ್ಲಿ ಜಯಗಳಿಸಿರುವುದಕ್ಕೆ ಪಟ್ಟಣದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಂಭ್ರಮಿಸಿ ಜಯಘೋಷ ಹಾಕಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೇರಿದ ಮುಖಂಡರು, ಕಾರ್ಯಕರ್ತರು ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆಯಿಂದ ಮತದಾರರು ದಾಖಲೆ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ ಎಂದು ಹೇಳಿದರು.

Contact Your\'s Advertisement; 9902492681

ಹಿರಿಯ ಮುಖಂಡ ಅಶೋಕ ಗುತ್ತೇದಾ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ಪುರಸಭೆ ಸದಸ್ಯ ಮೃತ್ಯುಂಜಯ ಆಲೂರೆ, ಶ್ರೀಶೈಲ ಖಜೂರಿ, ರಾಜಕುಮಾರ ಷಣ್ಮೂಖ, ತಾಪಂ ಮಾಜಿ ಉಪಾಧ್ಯಕ್ಷ ಲಕ್ಷ್ಮೀಣ ಬೀಳಗಿ, ವಿಜಯಕುಮಾರ ಕೋಥಳಿಕರ್, ಸುನೀಲ ಹಿರೋಳಿಕರ್, ಶೇಖರ ಪಾಟೀಲ, ಮತ್ತಿತರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here