ಚಿಂಚೋಳಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹೊಲಕ್ಕೆ ಉರುಳಿದ ಟಾಟಾ ಮ್ಯಾಕ್ಸ್, 20 ಜನರಿಗೆ ಗಂಭೀರವಾದ ಘಟನೆ ಚಿಂಚೋಳಿ ತಾಲೂಕಿನ ಸುಲೇಪೇಟ ಸಮೀಪ ಜರುಗಿದೆ.
ಚಾಲಕ ವೇಗವಾಗಿ ವಾಹನ ಚಲಾಯಿಸಿದ ಹಿನ್ನಲೆ ಟಾಟಾ ಮ್ಯಾಕ್ಸ್ ಗಾಡಿಯ ಎಕ್ಸೆಲ್ ಕಟ್ ಆಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಚಿಂಚೋಳಿ ತಾಲೂಕಿನ ಪಂಚಿಮಪಳ್ಳಿ ಬಳಿ ನಡೆದ ಘಟನೆ ಜರುಗಿದ್ದು, ಗಾಯಗೊಂಡ 20 ಜನರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರೆಲ್ಲರೂ ಸುಲೇಪೇಟ ನಿವಾಸಿಗಳು ಎಂದು ತಿಳಿದು ಬಂದಿದೆ.
ಇವರು ಕೂಲಿ ಕೆಲಸಕ್ಕೆಂದು ಸೇಡಂ ತಾಲೂಕಿನ ಈರನಪಲ್ಲಿಗೆ ತೆರಳುತ್ತಿದ್ದರು. ಮಾರ್ಗದ ಮಧ್ಯೆ ಏಕಾಏಕಿ ವಾಹನದ ಎಕ್ಸೆಲ್ ಕಟ್ ಆದ ಪರಿಣಾಮ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಸುಲೇಪೇಟ ಪೊಲೀಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…