ಕಲಬುರಗಿ: ಸ್ನೇಹಿತನ ಮೇಲಿನ ಹಲ್ಲೆಗೆ ಪ್ರತಿಕಾರ ಹಿನ್ನೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಮಾರಕಾಸ್ರ್ರಗಳಿಂದ ಪೊಲೀಸ್ ಪೇದೆ ಪುತ್ರನನ್ನು ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಪೊಲೀಸ್ ಪೇದೆ ಚಂದ್ರಕಾಂತ ಎಂಬುವರ ಪುತ್ರ ಅಭಿಷೇಕ್ (23) ಎಂಬಾತನನ್ನ ನಡು ರಸ್ತೆಯಲ್ಲಿ ಅಟ್ಟಾಡಿಸಿ ಲಾಂಗು ಮಚ್ಚುಗಳಿಂದ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲೆ ಸೆರೆಯಾಗಿದೆ.
ಅಭಿಷೇಕ್ ಕಳೇದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನಿಂದ ಕಲಬುರಗಿಗೆ ಬಂದಿದ್ದ ಇಂದು ಬೆಳಗ್ಗೆ ಜಿಮ್ ಹೋಗ್ತಿನಿ ಅಂತ ಮನೆಯಿಂದ ಬಂದಿದ್ದ ಕೇಂದ್ರ ಬಸ್ ನಿಲ್ದಾಣದ ಬಳಿ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳ ಗ್ಯಾಂಗ್ ಆತ ಬರ್ತಿದಂತೆ ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ.
ಕೆಳಗೆ ಬಿದ್ದವನೆ ಅಲ್ಲಿಂದ ಓಡಲು ಶುರು ಮಾಡಿದ್ದಾನೆ. ಮುಖ್ಯ ರಸ್ತೆಯಿಂದ ಓಡಿ ಬಂದು ಕೇಂದ್ರ ಬಸ್ ನಿಲ್ದಾಣದ ಒಳಗೆ ನುಗ್ಗಿದರು ಬಿಡದ ದುಷ್ಕರ್ಮಿ ನಾಲ್ಕೈದು ಜನರ ಗ್ಯಾಂಗ್ ಆತನನ್ನ ಮನಬಂದಂತೆ ಮಚ್ಚು ಲಾಂಗ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಬಸ್ ನಿಲ್ದಾಣದಲ್ಲಿ ಅಟ್ಟಾಡಿಸಿಕೊಂಡು ಓಡಿ ಬರುವ ದೃಶ್ಯ ಸದ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇನ್ನೂ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾವಿರಾರು ಜನರ ಮಧ್ಯೆ ನಡೆದ ಭೀಕರ ಹತ್ಯೆಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
ಸ್ಥಳಕ್ಕೆ ಡಿಸಿಪಿ ಅಡ್ಡೂರು ಶ್ರೀನಿವಾಸಲು ಹಾಗೂ ಅಶೋಕ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…