ಬಿಸಿ ಬಿಸಿ ಸುದ್ದಿ

27, 28 ರಂದು ಕಲಬುರಗಿಯಲ್ಲಿ ಎಐಡಿವೈಓ 5ನೇ ರಾಜ್ಯ ಮಟ್ಟದ ಯುವಜನ ಸಮ್ಮೇಳನ

ಕಲಬುರಗಿ: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಯುವಜನ ಸಂಘಟನೆಯ 5ನೇ ರಾಜ್ಯಮಟ್ಟದ ಯುವಜನ ಸಮ್ಮೇಳನ ಕಲ್ಬುರ್ಗಿಯಲ್ಲಿ ಇದೇ ತಿಂಗಳು 27 ಮತ್ತು 28ರಂದು ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶರಣಪ್ಪ ಉದ್ಬಾಳ್ ಮತ್ತು ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸಿದ್ದಲಿಂಗ ಬಾಗೇವಾಡಿ ತಿಳಿಸಿದರು.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ದೇಶದಾದ್ಯಂತ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ,ಬೆಲೆ ಏರಿಕೆ ಮತ್ತು ಸಾಂಸ್ಕೃತಿಕ ಅವನತಿಗಳು ವಿರುದ್ಧ ಹೋರಾಟ ತೀವ್ರಗೊಳಿಸುವ ಉದ್ದೇಶದಿಂದ ಈ ಸಮ್ಮೇಳನ ಆಯೋಜಿಸಲಾಗುತ್ತಿದೆ.’

ಈ ಸಮ್ಮೇಳನಕ್ಕೆ ನಾಡಿನ ಹೆಸರಾಂತ ಸಾಹಿತಿ ಮತ್ತು ಪ್ರಗತಿಪರ ಚಿಂತಕ,ನಾಡೋಜ ಡಾ.ಬರಗೂರು ರಾಮಚಂದ್ರಪ್ಪನವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಉಮಾ ಅವರು, ಅತಿಥಿಗಳಾಗಿ ಎಐಡಿವೈಓನ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಪ್ರತಿಭಾ ನಾಯಕ್ ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ರಮೇಶ ಲಂಡನಕರ್ ಅವರು ಆಗಮಿಸಲಿದ್ದಾರೆ.

ಎಐಡಿವೈಓ ನ ಅಖಿಲ ಅಧ್ಯಕ್ಷರಾದ ರಾಮಾಂಜನಪ್ಪ ಆಲ್ಬಳ್ಳಿ ಅವರು ಸಮ್ಮೇಳನದ ಮುಖ್ಯ ಭಾಷಣಕಾರರಾಗಿರುತ್ತಾರೆ. ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಿ.ಶಶಿಕುಮಾರ್‌ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು ರಾಜ್ಯಾಧ್ಯಕ್ಷೆ ಎಂ.ಉಮಾದೇವಿ ಯವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ 31 ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಆಯ್ದು ಪ್ರತಿನಿಧಿಗಳು ಭಾಗವಹಿಸುವರು’ ಎಂದರು.

‘ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ದಾಗಿ ಹೇಳಿದ ಪ್ರಧಾನಿ ಮೋದಿ ಅವರು ಮಾತು ಉಳಿಸಿಕೊಂಡಿಲ್ಲ. ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡು,ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದಾರೆ.ಉತ್ತಮ ಬದುಕು ಕಟ್ಟಿಕೊಳ್ಳಲು ಆಗದೆ ಮತ್ತು ಉದ್ಯೋಗವೂ ಇಲ್ಲದೇ ಜನರು ಸಾವನ್ನಪ್ಪಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಭರವಸೆಗಳನ್ನು ಈಡೇರಿಸಿದ ಕೇಂದ್ರ-ರಾಜ್ಯ ಸರ್ಕಾರಗಳು ಯುವ ಜನರ ಆಶಯ ಈಡೇರಿ ಸುತ್ತಿಲ್ಲ. ಮದ್ಯವ್ಯಸನಿಗಳಾಗಿ ಅಕ್ರಮ ಹಾದಿ ಹಿಡಿಯುತ್ತಿರುವ ಯುವ ಜನರಿಗೆ ಸೂಕ್ತ ಮಾರ್ಗದರ್ಶನ ಸಿಗುತ್ತಿಲ್ಲ. ಕೋಮು ಪ್ರಚೋದನೆಗೆ, ದ್ವೇಷ, ಹಿಂಸೆಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸಂಘಟನೆಯ ರಾಜ್ಯ ಸೆಕ್ರೆಟರಿಯೇಟ್ ಮಂಡಳಿ ಸದಸ್ಯ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಸಮಾಜದಲ್ಲಿನ ಅರಾಜಕತೆ ಪರಿಸ್ಥಿತಿಗೆ ಬಂಡವಾಳಶಾಹಿ ವ್ಯವಸ್ಥೆ ಮೂಲಕ ಮೂಲ ಕಾರಣ. ಅಸಮಾನತೆ ಸೃಷ್ಟಿಸುತ್ತಿರುವ ಈ ವ್ಯವಸ್ಥೆ ವಿರುದ್ಧ ದನಿಯೆತ್ತಲು ಯುವಜನ ಪ್ರಬಲ ಹೋರಾಟ ರೂಪಿಸಬೇಕಿಗಿದೆ’ ಮತ್ತು ಈ ರಾಜ್ಯ ಸಮ್ಮೇಳನ ಕಲಬುರ್ಗಿ ಜಿಲ್ಲೆಯ ಜನತೆ ಎಲ್ಲಾ ರೀತಿಯ ಸಹಾಯ ಸಹಕಾರ ನೀಡಿ ಸಮ್ಮೇಳನ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಇಂಧನ ಸೇರಿದಂತೆ ಅಗತ್ಯ ವಸ್ತು ಬೆಲೆ ಏರಿಕೆ ಸರ್ಕಾರ ನಿಯಂತ್ರಿಸಬೇಕು. ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಭರ್ತಿ ಮಾಡಬೇಕು. ಮಹಿಳೆಯರ ಮೇಲೆ ಅತ್ಯಾಚಾರ,ದೌರ್ಜನ್ಯ ಪ್ರಚೋದಿಸುವ ಅಶ್ಲೀಲ ಸಿನಿಮಾ ಸಾಹಿತ್ಯ ಮತ್ತು ಧೂಮಪಾನ, ಮದ್ಯಪಾನ ನಿಷೇಧಿಸಬೇಕು.ಗ್ರಾಮೀಣ ಉದ್ಯೋಗ ಖಾತ್ರಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು .ಎಂದು ಹೇಳಿದ್ದರು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ರಾಜ್ಯ ಸಮಿತಿ ಸದಸ್ಯ ಭೀಮಾಶಂಕರ ಪಾಣೇಗಾಂವ್, ಜಿಲ್ಲಾ ಅಧ್ಯಕ್ಷ ಜಗನ್ನಾಥ ಎಸ್. ಎಚ್. ಜಿಲ್ಲಾ ಕಾರ್ಯದರ್ಶಿ ಅಂಬಿಕಾ ಎಸ್. ಜಿ. ಸೇರಿದಂತೆ ಹಲವರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago