ಕಲಬುರಗಿ : ಸರಕಾರದ ಸಿ.ಡಿ.ಸಿ.ಯೋಜನೆಯಡಿ ಬರುವ ಜನಪರ ಯೋಜನೆಗಳನ್ನು ಮಂಜೂರು ಮಾಡಿಸಿಕೊಂಡು ಕಾಲಮಿತಿಯಲ್ಲಿ ಅದರ ಸದುಪಯೋಗಪಡಿಸಿಕೊಂಡು ಜನರ ಉಪಯೋಗಕ್ಕೆ ತರುತ್ತಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಬೀದರ ಜಿಲ್ಲೆಯ ಚಿಟಗುಪ್ಪ ನಗರಸಭೆ ಸದಸ್ಯರಾದ ಕ್ರಿಸ್ತಾನಂದ ರವರ ಕ್ರಿಯಾಶೀಲತೆಯನ್ನು ಪರಿಗಣಿಸಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಯಿತು.
ಅತಿ ಕಿರಿಯ ವಯಸ್ಸಿನ, ನಗರಸಭೆ ಸದಸ್ಯರಾದ ಕ್ರಿಸ್ತಾನಂದರವರು ಸರಕಾರದ ಯೋಜನೆಗಳು ಕಾಲಮಿತಿಯಲ್ಲಿ ಬಳಸಿಕೊಂಡು ಜನಪ್ರೀಯ ಯುವ ನಗರಸಭೆ ಸದಸ್ಯರಾಗಿದ್ದಾರೆ ಇವರ ಈ ರಚನಾತ್ಮಕ ಕಾರ್ಯವನ್ನು ಮೆಚ್ಚಿ, ಸಮಿತಿ ಇವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕ್ರಿಸ್ತಾನಂದರವರು ತಾವು ಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ಅಭಿಯಾನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವುದಾಗಿ ಶಪಥ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಮರನಾಥ ಪಾಟೀಲ, ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶಾಮರಾವ ಪ್ಯಾಟಿ ಸಮಿತಿಯ ಮುಖಂಡರಾದ ಜ್ಞಾನಮಿತ್ರ ಸ್ಯಾಮ್ಯೂವೆಲ್, ಸುನಿಲ್ ಕುಲಕರ್ಣಿ, ಶಿವಾನಂದ, ರವೀಂದ್ರಕುಮಾರ ಸೇರಿದಂತೆ ಇತರರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…