ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದ ಜನನಿಬಿಡ ಪ್ರದೇಶದಲ್ಲಿಯೇ ಗುಂಪೊಂದು ಮಾರಕಾಸ್ತ್ರ ಸಮೇತ ನಿರ್ಭಿತಿಯಿಂದ ಬಂದು ಸಾರ್ವಜನಿಕ ಸ್ಥಳದಲ್ಲಿ ಹತ್ಯೆ ನಡೆಸಿರುವುದನ್ನು ನೋಡಿದರೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಪುಷ್ಠಿ ಲಭಿಸುತ್ತದೆ.
ಕಾನೂನು ಸುವ್ಯವಸ್ಥೆ ಹದಗೆಡದಂತೆ ನಿಯಂತ್ರಣ ಮಾಡಬೇಕಾದ ಸರ್ಕಾರದ ನಿಷ್ಕ್ರೀಯತೆ ಒಂದೆಡೆಯಾದರೆ, ಇನ್ನೊಂದು ಕಡೆ ರಾಜಾ ರೋಷವಾಗಿ ಕೊಲೆಗಳು ನಡೆಯುತ್ತಿರುವುದು ಜಿಲ್ಲಾ ಪೊಲೀಸರ ನಡೆಯನ್ನು ಸಾರ್ವಜನಿಕರು ಅನುಮಾನದಿಂದ ನೋಡುವಂತಾಗಿದೆ. ಕೊಲೆ, ಸುಲಿಗೆ ಅತ್ಯಾಚಾರದಂತಹ ಕೃತ್ಯಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು ಸಹಜ. ಇದರಿಂದ ನಗರದಲ್ಲಿ ಭಯದ ವಾತವರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಯಾರು ಅಲ್ಲಗಳೆಯುವಂತಿಲ್ಲ.
ನಗರದ ಜನರೂ ಸದಾ ಭಯದಲ್ಲಿ ಇರುವಂತಹ ವಾತಾವರಣ ಸೃಷ್ಟಿಯಾಗಿದೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಮೂಲಕ ಪೊಲೀಸರು ನಗರದ ಜನರ ನೆಮ್ಮದಿಗೆ ಕಾರಣರಾಗಬೇಕಾದ ತುರ್ತು ಅಗತ್ಯವಿದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇವುಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕಾಗಿದೆ.
ತಪ್ಪಿತಸ್ಥ ಅಧಿಕಾರಿಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮವನ್ನು ಸರ್ಕಾರ ತೆಗೆದುಕೊಳ್ಳಬೇಕು ಮತ್ತು ಹಿರಿಯ ಪೊಲೀಸ ಅಧಿಕಾರಿಗಳು ರೌಡಿಗಳ ಹೆಡೆಮುರಿ ಕಟ್ಟಿದಾಗ ಮಾತ್ರ ನಗರದ ಜನ ನೆಮ್ಮದಿಯಿಂದ ಬದುಕಲು ಸಾಧ್ಯವಿದೆ. ಜಿಲ್ಲೆಯಲ್ಲಿ ಗುಂಪು ಹಲ್ಲೆಗಳು, ಮಾರಾಮಾರಿಗಳು ಮೀತಿ ಮೀರಿವೆ.
ಇವುಗಳಿಗೂ ಸಂಪೂರ್ಣವಾಗಿ ಕಡಿವಾಣ ಹಾಕಲು ಜಿಲ್ಲಾ ಪೊಲೀಸರು ಕ್ರಮಕೈಗೊಳ್ಳಬೇಕು ಅಪರಾಧಗಳು ನಿಯಂತ್ರಿಸಲು ಸದಾ ಎಚ್ಚರಿಕೆಯಿಂದ ಕಾರ್ಯಪ್ರವೃತರಾಗಬೇಕಿದೆ ಇಲ್ಲದಿದರೆ ಅಪರಾಧ ಕೃತ್ಯಗಳಿಗೆ ಕಡಿವಾಣ ಯಾವಾಗ ? ಎಂಬ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಪೊಲೀಸರು ಅವಕಾಶಕೊಡಬಾರದು ಎಂಬುದೇ ನಮ್ಮ ಆಶಯ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…