ಬಿಸಿ ಬಿಸಿ ಸುದ್ದಿ

ಶರಣ ಸೇವಾ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ: ಶಿವಮೂರ್ತಿ ಶಿವಾಚಾರ್ಯ ಶ್ರೀ

ಸುರಪುರ: ಶರಣ ಸೇವಾ ಸಂಸ್ಥೆ ಅಧ್ಯಕ್ಷ ಶಿವರಾಜ್ ಕಲಕೇರಿ ಪೂಜ್ಯ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನದ ಅಂಗವಾಗಿ ಗ್ರಂಥಾಲಯ ಉದ್ಘಾಟನೆ ಮಾಡಿರುವುದು ಯುವಕರಿಗೂ ಮತ್ತು ವಿದ್ಯಾರ್ಥಿಗಳಿಗೂ ಪ್ರೇರಣಾ ಕಾರ್ಯವಾಗಿದೆ, ಗ್ರಂಥಾಲಯ ಹಿರಿಯ ನಾಗರಿಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಾಡಿರುವ ಕಾರ್ಯಕ್ಕೆ ಯಶಸ್ವಿ ಆಗಲಿ, ಶರಣ ಸೇವಾ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಮಾತನಾಡಿ ಶುಭ ಹಾರೈಸಿದರು.

ನಗರದ ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿನ ಶ್ರೀ ಶರಣ ಗ್ರಂಥಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ಶಿವರಾಜ ಕಲಕೇರಿಯಂತಹ ಯುವಕರು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಶರಣಪ್ಪ ಕಲಕೇರಿಯವರಿಗೆ ಹಾಗು ಸಂಸ್ಥೆಯ ಅಧ್ಯಕ್ಷ ಶಿವರಾಜ ಕಲಕೇರಿ ಮತ್ತು ಅವರ ಗೆಳೆಯರಿಗೆ ಇನ್ನೂ ಹೆಚ್ಚಿನ ಕೆಲಸ ಮಾಡುವ ಶಕ್ತಿ ಶರಣ ಸಂತ ಮಹಾಂತರು ನೀಡಲೆಂದು ಹಾರೈಸಿದರು.

ಶಿವಾಚಾರ್ಯ ಸ್ವಾಮೀಜಿ ಅವರು ಹಾಗೂ ಕಲಬುರ್ಗಿ- ಯಾದಗಿರಿ ಜಿಲ್ಲೆಯ ಡಿ ಸಿ ಸಿ ಬ್ಯಾಂಕಿ ಉಪಾಧ್ಯಕ್ಷರು, ತಾಲೂಕು ವೀರಶೈವ ಲಿಂಗಾಯತ ಸಮಿತಿ ಸುರಪುರ ಅದ್ಯಕ್ಷ ಸುರೇಶ್ ಸಜ್ಜನ್ ಮಾತನಾಡಿ, ಶ್ರೀ ಶರಣ ಸೇವಾ ಸಂಸ್ಥೆ ವತಿಯಿಂದ ಅನೇಕ ಸಾಮಾಜಿಕ ಕಾರ್ಯಗಳು ಮಾಡುತ್ತಿರುವುದು ನಿಜಕ್ಕೂ ಬಹಳ ಸಂತಸ ವಾಗಿದೆ, ನಾಡಿನ ಮಠಾಧೀಶರ ಶಿವ ಭಕ್ತಿ ಮತ್ತು ಶರಣ ಭಕ್ತಿ ಅವರ ಆಶೀರ್ವಾದದೊಂದಿಗೆ ಸಂಸ್ಥೆಯ ಅಧ್ಯಕ್ಷ ಶಿವರಾಜ್ ಕಲಕೇರಿ ಉತ್ತಮ ಸೇವೆ ಹಾಗೂ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದು, ಶಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿ ಚೇತನ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸುವುದು ಜಿಲ್ಲೆಗೆ ಮಾದರಿ, ಇಂತಹ ಯುವಕರು ಬೆಳೆಯುವುದರಿಂದ ಅನೇಕ ಯುವಕರಿಗೆ ಮಾರ್ಗದರ್ಶನ ಆಗಲಿದೆ ಇನ್ನೂ ಹೆಚ್ಚಿನ ಸೇವಾ ಕಾರ್ಯ ಸಂಸ್ಥೆ ವತಿಯಿಂದ ನಡೆಯಲಿ ಮತ್ತು ಅವರಿಗೆ ನಮ್ಮ ಸಂಪೂರ್ಣವಾದ ಸಹಕಾರ ಇರಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡ ದೇಸಾಯಿ ದೇವರಗೋನಾಲ, ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಡೊಣೂರ , ಕಾಯಕ ಹಾಗೂ ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಅಧ್ಯಕ್ಷ ನಾಗಭೂಷಣ್ ಯಾಳಗಿ, ಸಂಸ್ಥೆಯ ಮುಖಂಡ ಮಲ್ಲಿಕಾರ್ಜುನ್ ಸುಬೇದಾರ್, ಮೌನೇಶ್ , ವಿಜಯ್ ಇತರರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago