ಸುರಪರು: ಆಧಾರ್ ಕಾರ್ಡ್ ಇಲ್ಲದವರು ಮತ್ತು ಆಧಾರ್ ಕಾರ್ಡ್‍ಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳಲು ಸಾರ್ವಜನಿಕರಿಗೆ ವಿಶೇಷ ಅಭಿಯಾನ ಆರಂಭಗೊಂಡಿದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳುವಂತೆ ದಿವಾಣಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಹಾಗು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಚಿದಾನಂದ ಬಡಿಗೇರವರು ಸಾರ್ವಜನಿಕರಿಗೆ ಕರೆ ನೀಡಿದರು.
ನಗರದ ತಾಲೂಕು ದಂಡಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಆಧಾರ್ ಕಾರ್ಡ್ ಮತ್ತು ದಾಖಲಾತಿ ಮತದಾರರ ಪಟ್ಟಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಆಧಾರ್ ಕಾರ್ಡ್ ಮತ್ತು ಮತದಾರರ ಪಟ್ಟಿಯಲ್ಲಿನ ದೋಷ ಸರಿಪಡಿಸಿಕೊಳ್ಳಲು ಮತ್ತು ಗುರುತಿನ ಚೀಟಿ ಮಾಡಿಸಿಕೊಳ್ಳಲು ಅವಕಾಶವಿದ್ದು ಆಗಿಂದಾಗಲೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ ಮಾಡಿಸಿಕೊಳ್ಳು ಈ ಶಿಬಿರ ಸಾರ್ವಜನಿಕರಿಗೆ ಉಪಯುಕ್ತವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಅನೇಕ ಜನ ಸಾರ್ವಜನಿಕರಿಗೆ ಆಧಾರ್ ಕಾರ್ಡ್‍ಲ್ಲಿನ ದೋಷ ಸರಿಪಡಿಸಿ ಕೊಡಲಾಯಿತು ಅಲ್ಲದೆ ಅನೇಕರಿಗೆ ಚುನಾವಣಾ ಗುರುತಿನ ಚೀಟಿಯನ್ನು ವಿತರಿಸಲಾಯಿತು.ತಹಸೀಲ್ದಾರರಾದ ಸುಬ್ಬಣ್ಣ ಜಮಖಂಡಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ ಕಿಲ್ಲೇದಾರ,ಉಪಾಧ್ಯಕ್ಷ ಅಶೋಕ ಬಿ ಕವಲಿ,ಸಹಾಯಕ ಸರಕಾರಿ ಅಭಿಯೋಜಕ ರಾಘವೇಂದ್ರ ಜಹಾಗೀರದಾರ್,ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲ ತಳವಾರ ಮತ್ತು ಉಪನ್ಯಾಸಕರಾಗಿ ಪ್ಯಾನಲ್ ವಕೀಲ ಆದಪ್ಪ ಹೊಸ್ಮನಿ,ಸಂತೋಷ ಸಿ ಗಾರಂಪಳ್ಳಿ,ವಕೀಲ ಮಂಜುನಾಥ ಹುದ್ದಾರ್, ನಾಗಪ್ಪ ಚವಲಕರ್ ಭೀಮು ಬನಸೋಡೆ ಸೇರಿದಂತೆ ತಹಸೀಲ್ ಕಛೇರಿ ಸಿಬ್ಬಂದಿಗಳು ಮತ್ತಿತರರಿದ್ದರು.