ಶಹಾಬಾದ: ಸಾರ್ವಜನಿಕರು ಹಸಿ ಕಸ, ಒಣ ಕಸವನ್ನು ಬೇರ್ಪಡಿಸಿ ನೀಡಬೇಕು.ಅದನ್ನು ಬಿಟ್ಟು ಎಲ್ಲೆಂದರಲ್ಲಿ ಎಸೆಯದೇ ಕಸ ಸಂಗ್ರಹ ಮಾಡುವ ವಾಹನ ಬಂದಾಗ ನೀಡಬೇಕು ಎಂದು ನಗರಸಭೆಯ ಆರೋಗ್ಯ ನಿರೀಕ್ಷಕ ಶರಣು ಹೇಳಿದರು.
ಅವರು ನಗರಸಭೆಯ ಕಾರ್ಯಾಲಯದಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತ್ಯಾಜ್ಯ ವಿಂಗಡಣೆ, ಸ್ವಚ್ಛ ಸಾರ್ವಜನಿಕ ಶೌಚಾಲಯಗಳ ಬಳಕೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದ ಸ್ವಚ್ಚತೆ ಮೂಲಕ ಜನರ ಆರೋಗ್ಯ ಕಾಪಾಡಲು ಮುಂದೆ ಬರಬೇಕು. ಸ್ವಚ್ಛ ಭಾರತ ಅಭಿಯಾನವೂ ಸ್ವಚ್ಛತೆಗೆ ಮಾತ್ರ ಸಿಮೀತವಾಗದೇ ನಗರದ ಸಮಗ್ರ ಅಭಿವೃದ್ಧಿಗೂ ಪ್ರೇರಣೆಯಾಗಬೇಕು. ನಗರಸಭೆಯಿಂದ ನಿಮ್ಮ ಮನೆಯ ಮುಂದೆ ಕಸ ಸಂಗ್ರಹ ಮಾಡುವ ವಾಹನ ವ್ಯವಸ್ಥೆ ಮಾಡಿದ್ದಾರೆ.ಕಸವನ್ನು ಮನೆಯ ಮುಂದೆ, ಚರಂಡಿಗಳಲ್ಲಿ ಎಸೆಯುವುದರಿಂದ ರೋಗಗಳ ತಾಣವಾಗಿ ಮಾರ್ಪಟ್ಟು ನಮ್ಮ ಆರೋಗ್ಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಸಾರ್ವಜನಿಕರು ಕಸವನ್ನು ಬೇರ್ಪಡಿಸಿ ನೀಡಬೇಕೆಂದು ಹೇಳಿದರು.
ಆರೋಗ್ಯ ನಿರೀಕ್ಷಕ ರಾಜೇಶ ಮಾತನಾಡಿ, ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ನಗರದ ಸ್ವಚ್ಚತೆಗೆ ಆದ್ಯತೆ ನೀಡುವ ಮೂಲಕ ರಾಷ್ಟ್ರಪಿತ ಗಾಂಧೀಜಿ ಅವರು ಕಂಡ ಕನಸನ್ನು ನನಸು ಮಾಡಲು ಮುಂದೆ ಬರಬೇಕೆಂದು ಇದೇ ಸಂದರ್ಭದಲ್ಲಿ ಓಂ ಸಾಯಿ ಕಲಾ ತಂಡದಿಂದ ಶೌಚಾಲಯ ಬಳಕೆ, ಒಣಕಸ-ಹಸಿ ಕಸ,ಪ್ಲಾಸ್ಟಿಕ್ ಬಳಕೆಯ ಹಾನಿ, ಸರಾಯಿಯಿಂದಾಗುವ ತೊಂದರೆ ಇತರ ವಿಷಯಗಳ ಕುರಿತು ನಗರದ ಜನರಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಸಿಬ್ಬಂದಿಗಳಾದ ಹಣಮಂತ ಪವಾರ, ಈರಣ್ಣ ಕುರಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…