ಬಂಗಾರಪೇಟೆ: ತಾಲ್ಲೂಕಿನ ಚಿಕ್ಕಅಂಕಂಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಭಾರತದ 75ನೇ ಅಮೃತ ಮಹೋತ್ಸವದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವುದು, ಕಾನೂನು ಸಾಕ್ಷರತೆ, ಉಚಿತ ಕಾನೂನಿನ ನೆರವು, ಸಲಹೆ ನೀಡುವುದು, ಜನತಾ ನ್ಯಾಯಾಲಯ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ ಕಡಿಮೆ ಖರ್ಚಿನಲ್ಲಿ ಇತ್ಯರ್ಥಗೊಳಿಸುವುದು, ಆಸ್ತಿ ವಿವಾದ ಕಾಯ್ದೆ ಮತ್ತು ಜನನ-ಮರಣ ಕಾಯ್ದೆ ಜನರಿಗೆ ಕಾನೂನಿನ ಅರಿವನ್ನು ತಿಳಿಸುವ ಹಿನ್ನೆಲೆಯಲ್ಲಿ ಚಿಕ್ಕಅಂಕಂಡಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಂಗಾರಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಅಜಿತ್ ದೇವರಮನಿ ರವರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ ಎಂ ಹರೀಶ್ ಕುಮಾರ್, ಬಂಗಾರಪೇಟೆ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ರಾಜಗೋಪಾಲ್, ವಕೀಲರ ಸಂಘದ ಕಾರ್ಯದರ್ಶಿಗಳಾದ ಚಿನ್ನುರಾಜು, ವಕೀಲರಾದ ವೇಣುಗೋಪಾಲ, ಪ್ರಸಾದ್, ನಂಜುಂಡಪ್ಪ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಚಿತ್ರರವರ, ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.