ಕಲಬುರಗಿ: ಮಳಿಗೆಯೊಂದರ ಶೆಟರ್ ಮುರಿದು ಸುಮಾರು ೨೦೦೦ರೂ.ಗಳನ್ನು ದೋಚಿ ಪರಾರಿಯಾದ ಘಟನೆ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದ ಬಳಿ ಇರುವ ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ಹೋಗುವ ಮಾರ್ಗದಲ್ಲಿನ ಎಂ.ಡಿ. ರಾಜ್ ಕಾಂಪ್ಲೆಕ್ಸ್‌ನಲ್ಲಿ ವರದಿಯಾಗಿದೆ.
ಶ್ರೀ ಬಾಲಾಜಿ ಮಾರ್ಕೆಟಿಂಗ್‌ನಲ್ಲಿಯೇ ಕಳ್ಳತನವಾಗಿದೆ. ಎಂದಿನಂತೆ ಬಾಲಾಜಿ ಮಾರ್ಕೆಟಿಂಗ್ ಮಳಿಗೆಯ ವ್ಯಾಪಾರಿಗಳು ವಹಿವಾಟು ಮುಗಿಸಿ ರಾತ್ರಿ ಬೀಗ ಹಾಕಿಕೊಂಡು ಹೋದಾಗ ರಾತ್ರಿ ಯಾರೋ ಶೆಟರ್ ಬೀಗ ಮುರಿದು ಒಳಹೋಗಿ ಕೇವಲ ೨೦೦೦ರೂ.ಗಳನ್ನು ದೋಚಿಕೊಂಡು ಹೋಗಿದ್ದಾರೆ. ಆದಾಗ್ಯೂ, ಮಳಿಗೆಯಲ್ಲಿದ್ದ ಬೆಲೆಬಾಳುವ ಸಾಮಾನುಗಳನ್ನು ಕಳ್ಳತನ ಮಾಡಿಲ್ಲ.
ಕೇವಲ ಹಣಕ್ಕಾಗಿಯೇ ಈ ಕಳ್ಳತನ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮದ್ಯವ್ಯಸನಿಗಳ ಕೈವಾಡ ಇರುವ ಕುರಿತು ಅನುಮಾನವಿದೆ. ಸುದ್ದಿ ತಿಳಿದು ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯ ಪಿಎಸ್‌ಐ ಉದ್ಧಂಡಪ್ಪ ಮಣ್ಣೂರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…