ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ದಲಿತರಿಗೆ ರಾಜಕೀಯ ಅಧಿಕಾರ ನೀಡುವ ದೃಷ್ಟಿಯಿಂದ ಚುನಾವಣೆಗಳಲ್ಲಿ ದಲಿತ ಸಮುದಾಯದ ಪ್ರತಿನಿಧಿಗಳಿಗೆ ನಿರ್ದಿಷ್ಟ ವಿಧಾನಸಭಾ ಮತ್ತು ಲೋಕಸಭಾ ಸ್ಥಾನಗಳನ್ನು ಮೀಸಲಿರಿಸುವ ಪ್ರಕ್ರಿಯೆಗೆ ಸಾಂವಿಧಾನಿಕ ಮನ್ನಣೆ ನೀಡಿದ್ದರು.
ಕರ್ನಾಟಕದಲ್ಲಿ ದಲಿತ ಸಮುದಾಯದ ಮತ ಬ್ಯಾಂಕ್ ಶೇ.25ಕ್ಕೂ ಹೆಚ್ಚಿದ್ದು, 2008ರ ವಿಧಾನಸಭಾ ಚುನಾವಣೆಯವರೆಗೆ ದಲಿತ ಸಮುದಾಯಗಳಿಗೆ 36 ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿತ್ತು. 2008ರ ವಿಧಾನಸಭಾ ಚುನಾವಣೆಯ ನಂತರ ಇದು 39ಕ್ಕೆ ಏರಿದೆ. ಸ್ವಾತಂತ್ರ್ಯ ನಂತರ ಅನೇಕ ದಲಿತ ನಾಯಕರು ರಾಜಕೀಯ ಅಂಗಳದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ.
ಬಿ.ಬಸವಲಿಂಗಪ್ಪ, ಕೆ.ಎಚ್. ರಂಗನಾಥ್, ಮಲ್ಲಿಕಾರ್ಜುನ ಖರ್ಗೆ, ಬಿ. ಶಂಕರಾನಂದ, ಎನ್. ರಾಚಯ್ಯ, ಬಿ. ರಾಚಯ್ಯ, ಡಾ. ಜಿ. ಪರಮೇಶ್ವರ ಹೀಗೆ ಅನೇಕ ದಲಿತ ನಾಯಕರು ರಾಜಕೀಯ ಮೀಸಲು ನೀತಿಯ ಪ್ರಯೋಜನ ಪಡೆದುಕೊಂಡು ಸಮರ್ಥ ಆಡಳಿತಗಾರರಾಗಿ, ದೂರದೃಷ್ಟಿಯ ನಾಯಕರಾಗಿ ಹೊರಹೊಮ್ಮಿರುವುದನ್ನು ಕಾಣಬಹುದು. ನಿರ್ದಿಷ್ಟ ರಾಜಕೀಯ ಸಂದರ್ಭಗಳಲ್ಲಿ ದಲಿತ ಸಮುದಾಯದ ಅನೇಕ ನಾಯಕರು ಮುಖ್ಯಮಂತ್ರಿ ಗಾದಿಯಿಂದ ವಂಚಿತರಾಗಿರುವ ನಿದರ್ಶನಗಳೂ ಇವೆ.
ಅನೇಕ ಸಂದರ್ಭಗಳಲ್ಲಿ ದಲಿತ ಸಮುದಾಯದ ನಾಯಕರು ನಿರ್ದಿಷ್ಟ ವಿಧಾನಸಭಾ ಕ್ಷೇತ್ರಗಳಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತ ದಾಖಲೆ ಬರೆದಿರುವುದನ್ನು ಕಾಣಬಹುದು, ಗುರುಮಟ್ಕಲ್ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 8 ಬಾರಿ ಶಾಸಕರಾಗಿ, 9ನೇ ಬಾರಿಗೆ ಗುಲ್ಬರ್ಗ ಮೀಸಲು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಗೊಂಡಿದ್ದರು. ಅದೇ ರೀತಿ ಬೆಳಗಾವಿ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿ. ಶಂಕರಾನಂದ ಅವರು 1967ರಿಂದ 1991ರವರೆಗೆ 7 ಬಾರಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಆದರೆ, ದಲಿತ ಸಮುದಾಯದ ನಾಯಕರೊಬ್ಬರು ಮೀಸಲು ಕ್ಷೇತ್ರದಿಂದ ಹೊರತು ಪಡಿಸಿ ಸಾಮಾನ್ಯ ಕ್ಷೇತ್ರದಿಂದ ಆಯ್ಕೆ ಆಗಿರುವ ನಿದರ್ಶನ ಕಡಿಮೆ. 1984ರ ಲೋಕಸಭಾ ಚುನಾವಣೆಯಲ್ಲಿ ಕೆ. ಎಚ್. ರಂಗನಾಥ್ ಅವರು ಸಾಮಾನ್ಯ ಕ್ಷೇತ್ರದಿಂದ ಚುನಾವಣಾ ಅಖಾಡ ಪ್ರವೇಶಿಸಿ ಗೆಲುವು ಸಾಧಿಸಿದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ, ದೇವರಾಜು ಅರಸು ಸಂಪುಟದಲ್ಲಿ ಪ್ರಭಾವಶಾಲಿ ಸಚಿವರಾಗಿದ್ದರು. 1984ರ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಸಾಮಾನ್ಯ ಲೋಕಸಭಾ ಕ್ಷೇತ್ರದಿಂದ ತೃಪ್ತಿಕರ ಬಹುಮತದೊಡನೆ ಲೋಕಸಭೆಯನ್ನು ಪ್ರವೇಶಿಸಿದ್ದರು.
1978ರ ವಿಧಾನಸಭಾ ಚುನಾವಣೆಯಲ್ಲಿ ದೇವರಾಜು ಅರಸು ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ವಿಧಾನÜಸಭಾ ಕ್ಷೇತ್ರದಿಂದ ದಲಿತ ಸಮುದಾಯ(ಕೊರಮ)ದ ಕೆ.ಯೆಂಕಟಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರು.
ಈ ಚುನಾವಣೆಯಲ್ಲಿ ಯೆಂಕಟಪ್ಪರವರು ಬಾರಿ ಬಹುಮತದಿಂದ ಶಾಸಕರಾಗಿ ಆಯ್ಕೆಗೊಂಡಿದ್ದರು. ದಲಿತ ಸಮುದಾಯದ ವ್ಯಕ್ತಿಯೊಬ್ಬರು ಸಾಮಾನ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ನಿದರ್ಶನ ಇದೊಂದೇ..!
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…