ಕಲಬುರಗಿ: ನವೆಂಬರ್ 20 ರಂದು ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಕುದುರೆ ವ್ಯಾಪಾರ ಮಾಡಿ ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಪಾರದರ್ಶಕವಾಗಿ ಚುನಾವಣೆ ನಡೆಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಅವಧಿ ಮುಗಿದು ಎರಡು ವರ್ಷ ಆಗಿದೆ.ಇತ್ತೀಚೆಗೆ ಮಹಾನಗರ ಪಾಲಿಕೆ ಚುನಾವಣೆ ಮುಗಿದಿದ್ದು ಯಾವ ಪಕ್ಷಕ್ಕೂ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮಹಾಪೌರ ಪಟ್ಟಕ್ಕಾಗಿ ರಾಜ್ಯದ ಆಡಳಿತರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇದೆ.ಎರಡೂ ಪಕ್ಷಕ್ಕೆ ಬಹುಮತ ಇಲ್ಲದೆ ಇರುವುದರಿಂದ ಅಧಿಕಾರ ಹಿಡಿಯಲು ಅನೈತಿಕ ಮಾರ್ಗ ಹಿಡಿಯುತ್ತಿವೆ.ಪಾಲಿಕೆ ಸದಸ್ಯರಿಗೆ ಆಸೆ,ಆಮೀಷ ಒಡ್ಡುವ ಕೆಲಸವು ನಡೆಯುತ್ತಿದೆ.ಪಕ್ಷಾಂತರ ಮಾಡಿಸುವ ಸಂಚು ನಡೆಯುತ್ತಿದೆ.ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ.ಸದಸ್ಯರ ಖರೀದಿಗೆ ಉಭಯ ಪಕ್ಷಗಳು ಮುಂದಾಗುತ್ತಿವೆ.ಕೂಡಲೇ ಜಿಲ್ಲಾಡಳಿತ ಮತ್ತು ಚುನಾವಣಾಧಿಕಾರಿಗಳು ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.
ಎರಡು ವರ್ಷದಿಂದ ನಗರದ 55 ವಾರ್ಡಗಳಿಗೆ ಪಾಲಿಕೆ ಸದಸ್ಯರಿಲ್ಲದೆ ಮೂಲ ಸೌಕರ್ಯ ಕೆಲಸಗಳು ನೆನೆಗುದಿಗೆ ಬಿದ್ದಿವೆ.ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ.ನಗರದ ಜನರು ಈಗಾಗಲೇ ತೊಂದರೆ ಅನುಭವಿಸುತ್ತಿದ್ದಾರೆ.ಇದನ್ನು ಗಮನದಲ್ಲಿಟ್ಟುಕೊಂಡು ಮಹಾನಗರ ಪಾಲಿಕೆಗೆ ನ್ಯಾಯಯುತವಾಗಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…