ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಬೈಕ್ ರ‍್ಯಾಲಿ

0
23

ಕಲಬುರಗಿ: ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅಯೋಜಿಸಿದ ಮೆಗಾ ಬೈಕ್ ರ‍್ಯಾಲಿಗೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾಯಮೂರ್ತಿ ಆರ್. ದೇವದಾಸ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ. ಹೆಚ್.ಪಿ.ಸಂದೇಶ್, ನ್ಯಾ. ಎಂ.ಐ.ಅರುಣ, ನ್ಯಾ.ಎಂ.ಜಿ.ಎಸ್.ಕಮಲ್, ನ್ಯಾ.ರಾಜೇಂದ್ರ ಬದಾಮಿಕರ್, ನವದೆಹಲಿಯ ಹೆಚ್.ಆರ್.ಎ.ಸಿ.ಎಫ್ ಸದಸ್ಯ ಚಂದ್ರಕಾಂತ ಪಾಟೀಲ, ಪ್ರಭಾರಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಗದೀಶ ವಿ.ಎನ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಶಾಂತ ಎಂ. ಚೌಗಲೆ, ಕಲಬುರಗಿ ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ರಾಜಕುಮಾರ ಕಡಗಂಚಿ, ಕಾರ್ಯದರ್ಶಿ ಪಿ.ಎನ್.ಕಪನೂರ ಸೇರಿದಂತೆ ವಿವಿಧ ಶ್ರೇಣಿಯ ನ್ಯಾಯಾಧೀಶರು,  ನ್ಯಾಯವಾದಿಗಳು ಕೋರ್ಟ್ ಸಿಬ್ಬಂದಿಗಳು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here