ಆಳಂದ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಾಹಿತ್ಯ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಅವರನ್ನು ಆಳಂದನ ಕನ್ನಡ ಸಾಹಿತ್ಯ ಪರಿಷತ್ ಮತದಾರರು ಬೆಂಬಲಿಸಬೇಕು ಎಂದು ಚುಟುಕು ಸಾಹಿತ್ಯ ಪರಿಷತ್ ತಾಲೂಕಾ ಅಧ್ಯಕ್ಷ ಹಣಮಂತ ಶೇರಿ ಪರಿಷತ್ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ವಿಜಯಕುಮಾರ ತೇಗಲತಿಪ್ಪಿ ಅವರು ಅತ್ಯಂತ ಸಮರ್ಥ ಮತ್ತು ದಕ್ಷ ಅಭ್ಯರ್ಥಿಯಾಗಿದ್ದು ಕಳೆದ ಎರಡು ದಶಕಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಹಲವಾರು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜಿಲ್ಲೆಯ ಹಲವು ಪ್ರತಿಭೆಗಳಿಗೆ ವೇದಿಕೆ ಕೊಟ್ಟಿದ್ದಾರೆ ಹೀಗಾಗಿ ಇನ್ನಷ್ಟೂ ಸೇವೆ ಮಾಡುವ ನಿಟ್ಟಿನಲ್ಲಿ ಮತದಾರರು ಇದೊಂದು ಬಾರಿ ವಿಜಯಕುಮಾರ ತೇಗಲತಿಪ್ಪಿ ಅವರಿಗೆ ಅವಕಾಶ ಮಾಡಿ ಕೊಡಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.