ಬಿಸಿ ಬಿಸಿ ಸುದ್ದಿ

ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯಿಂದ ವಿದ್ಯಾರ್ಥಿ ಸಮ್ಮೇಳನ

ಶಹಾಬಾದ: ನಗರದಲ್ಲಿ ಮಂಗಳವಾರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯಿಂದ ಶಹಾಬಾದ ಸ್ಥಳೀಯ ಮಟ್ಟದ ೭ನೇ ವಿದ್ಯಾರ್ಥಿ ಸಮ್ಮೇಳನ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಓ ಸಂಘಟನೆಯ ಜಿಲ್ಲಾ ಅಧ್ಯಕ್ಷ ಹಣಮಂತ ಎಸ್.ಎಚ್ ಮಾತನಾಡಿ, ಶಿಕ್ಷಣ ಕ್ಷೇತ್ರ ಮೇಲಿಂದ ಮೇಲೆ ದಾಳಿಯನ್ನು ಎದುರಿಸುತ್ತಿದೆ. ನಮ್ಮನ್ನಾಳಿದ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲಾ ಸರ್ಕಾರಗಳು ಶಿಕ್ಷಣ ನೀಡುವ ತಮ್ಮ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿವೆ. ಬಿಜೆಪಿ ಸರ್ಕಾರ ಸಹ ಯಾವುದೇ ವ್ಯತ್ಯಾಸ ಇಲ್ಲದೆ ಮುಂದುವರೆಸಿದೆ. ’ಅಚ್ಛೇ ದಿನ್’ ತರುವ ಭರವಸೆ ನೀಡಿದ ಮೋದಿ ಸರ್ಕಾರ, ಮೊದಲನೆ ಕೇಂದ್ರ ಬಜೆಟ್ ನಲ್ಲಿ ಶಿಕ್ಷಣಕ್ಕೆ ಶೇ ೧೦ ರ? ಮೀಸಲಿಡಬೇಕಾಗಿತ್ತು.

ಆದರೆ ಈಗ ಮೀಸಲಿಡುತ್ತಿರುವ ಒಟ್ಟಾರೆ ಹಣ ಶೇಕಡಾ ೦.೩ ಕ್ಕಿಂತಲೂ ಕಡಿಮೆಯಾಗಿದೆ. ಅ? ಅಲ್ಲದೆ ವಿದ್ಯಾರ್ಥಿ ವಿರೋಧಿಯಾದ ಹೊಸ ಶಿಕ್ಷಣ ನೀತಿಯು ಜಾರಿಮಾಡುತ್ತಿದೆ. ಖಾಸಗಿ ಶಾಲೆಗಳು ತಮಗಿ? ಬಂದಂತೆ ಶುಲ್ಕವನ್ನು ನಿಗದಿಗೊಳಿಸಲು ಕಾನೂನಾತ್ಮಕವಾಗಿ ಮುಕ್ತ ಅವಕಾಶ ನೀಡುತ್ತಿದೆ.. ಈ ಹಿನ್ನಲೆಯಲ್ಲಿ ಮುಂಬರುವ ದಿನಗಳು ಬಡ-ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕರಾಳ ದಿನಗಳಾಗಿ ಪರಿಣಮಿಸಲಿವೆ ಈ ಪರಿಸ್ಥಿತಿಯಲ್ಲಿ ವಿಧ್ಯಾರ್ಥಿ ಹೋರಾಟಗಳನ್ನು ಇನ್ನ? ಬಲಿ?ಗೊಳಿಸುವ ಅವಶ್ಯಕತೆ ನಮ್ಮ ಮುಂದಿದೆ. ಶಿಕ್ಷಣದ ಹಲವಾರು ಜ್ವಲಂತ ಸಮಸ್ಯೆಗಳಾದ ಶಿಕ್ಷಣ ವ್ಯಾಪಾರೀಕರಣ , ಸರ್ಕಾರಿ ಶಿಕ್ಷಣ ಸಂಸ್ಥೆಗಳು ಅಧೋಗತಿಗೆ ತಲುಪುತ್ತಿವೆ, ಇಂತಹ ಸಮಸ್ಯೆಗಳ ವಿರುದ್ಧ ಹೋರಾಟ ಬೆಳೆಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಎಸ್‌ಯುಸಿಐ ಕಮುನಿಷ್ಟ ಪಕ್ಷದ ಕಾರ್ಯದರ್ಶಿ ಗಣಪತ್‌ರಾವ್ ಮಾನೆ, ಕೇವಲ ಸರ್ಟಿಫಿಕೇಟ್ ಅಥವಾ ಅಂಕಗಳಿಗಾಗಿ ಮತ್ತು ವ್ಯಾಪಾರೀಕರಣಕ್ಕಾಗಿ ಶಿಕ್ಷಣ ಆಗಬಾರದು. ಸ್ವಾತಂತ್ರ್ಯ ಹೋರಾಟಗಾರರ, ಕ್ರಾಂತಿಕಾರಿಗಳ ವಿಚಾರಗಳನ್ನು ವಿದ್ಯಾರ್ಥಿಗಳ ಮನಸ್ಸುಗಳಲ್ಲಿ ಬಿತ್ತಿ, ಅನ್ಯಾಯದ ವಿರುದ್ಧದ ಹೋರಾಟದ ಸ್ಪೂರ್ತಿಯನ್ನು ತುಂಬುವ ಉದ್ದೇಶ ಶಿಕ್ಷಣದಾಗಬೇಕು ಎಂದರು.

ಸರಕಾರಿ ಪದವಿ ಪೂರ್ವ ಕಾಲೇಜಿನ ಜಗನ್ನಾಥ.ಆರ್.ಹೊಸಮನಿ ಮಾತನಾಡಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಅನ್ಯಾಯದ ವಿರುದ್ದ ಧ್ವನಿ ಎತ್ತಬೇಕು. ಎಂದು ಹೇಳಿದರು. ಎಐಡಿಎಸ್‌ಓ ಶಹಾಬಾದ ಅಧ್ಯಕ್ಷ ತುಳಜರಾಮ.ಎನ್.ಕೆ ಅಧ್ಯಕ್ಷತೆ ವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago