ಶಹಾಬಾದ : ಕೋವಿಡ್-೧೯ ಭಯದಿಂದ ದೂರವಾಗಿ ಮಕ್ಕಳನ್ನು ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳಿಗೆ ಎಲ್ಲಾ ಪೋಷಕರು ಕಳುಹಿಸಬೇಕೆಂದು ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.
ಅವರು ಸೋಮವಾರ ನಗರದ ಅಪಪರ ಮಡ್ಡಿ-೧ ರ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ಅಂಗನಾವಾಡಿ ಪುನರಾರಂಭ ಹಾಗೂ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿ ಮತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಎಲ್ಲರೂ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ಓದಿಸುವ ಪರಿಪಾಠ ಬೆಳೆಯಬೇಕು,ಕೊರೊನಾ ಬಗ್ಗೆ ಮಕ್ಕಳಲ್ಲಿ ಭಯ ಇಲ್ಲದಂತೆ ಮಾಡಿ ಕಲಿಕಾ ಪೂರಕ ವಾತಾವರಣ ನಿರ್ಮಾಣ ಮಾಡಬೇಕು.ಮಕ್ಕಳಲ್ಲಿ ಪೌಷ್ಠಿಕಾಂಶ ಕಡಿಮೆಯಾಗದಂತೆ ಅವರಿಗೆ ಸರಿಯಾದ ಸಮಯಕ್ಕೆ ಉತ್ತಮ ಸಮತೋಲನ ಆಹಾರ ನೀಡಬೇಕು.ಅಲ್ಲದೇ ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಚಾಚು ತಪ್ಪದೇ ನೀಡಬೇಕು.ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕೆಂದು ಹೇಳಿದರು.
ಅಂಗನವಾಡಿ ಮೇಲ್ವಿಚಾರಕಿ ಮೀನಾಕ್ಷಿ ಮಾತನಾಡಿ, ಸುಮಾರು ೨೦ ತಿಂಗಳ ನಂತರ ಅಂಗನವಾಡಿ ಕೇಂದ್ರಗಳು ಪುನಾರಾರಂಭ ಮಾಡಿದ್ದು, ಕೇಂದ್ರಗಳನ್ನು ಸ್ಯಾನಿಟೈಜರ್ ಮಾಡಿ ಎಲ್ಲಾ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ.ಅಲ್ಲದೇ ಪೋಷಕರ ಒಪ್ಪಿಗೆ ಪಡೆದ ನಂತರವೇ ಮಕ್ಕಳನ್ನು ಕೇಂದ್ರಗಳಿಗೆ ದಾಖಲಿಸಲಾಗುತ್ತಿದ್ದು, ಪ್ರತಿಯೊಬ್ಬ ಪೋಷಕರು ಕಡ್ಡಾಯವಾಗಿ ಎರಡು ಲಸಿಕೆ ಪಡೆದ ನಂತರವೇ ಮಕ್ಕಳನ್ನು ಅಂಗನವಾಡಿಗೆ ದಾಖಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸರಕಾರಿ ಶಾಲೆಯ ಶಿಕ್ಷಕರಾದ ಪ್ರಮೋದ ಹಾಗೂ ಅಂಗನವಾಡಿ ಕಾರ್ಯಕರ್ತರು ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…