ಸೇಡಂ: ವಿವಿಧತೆಯಲ್ಲಿ ಏಕತೆ, ಸಮಾನತೆ, ಸಹೋದರತೆ,ಸಹಬಾಳ್ವೆಯ ಅಡಿಪಾಯದ ಮೇಲೆ ರಚಿತವಾದ ವಿಶ್ವದಲ್ಲಿಯೇ ಶ್ರೇಷ್ಠತೆ ಹೊಂದಿರುವ ಭಾರತೀಯ ಸಂವಿಧಾನವನ್ನು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿಯಾದರೆ ಸಂವಿಧಾನ ತಿದ್ದುಪಡಿ ಮಾಡುವುದು ಖಚಿತವೆಂದು ವಿವಾದಾತ್ಮಕ ಹೇಳಿಕೆ ನೀಡಿರು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಭಾರತ ಮುಕ್ತಿ ಮೋರ್ಚಾ ಸಂಘಟನೆ ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಾರುತಿ ಗಂಜಗಿರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ ಮೋದಿ ಹೆಸರಲ್ಲಿ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿ ಯತ್ನಾಳ್ ಸಣ್ಣತನ ಹೋರಹಾಕಿರುವುದಲ್ಲದೆ ಸಾಮಾಜಿಕ ಅಭಿವೃದ್ಧಿಯಲ್ಲಿ ವಿಶ್ವಾಸವಿಟ್ಟು ಮತಹಾಕಿ ವಿಧಾನಸಭೆಗೆ ಕಳುಹಿಸಿದ ಜನರಲ್ಲಿ ಗೊಂದಲವುಂಟು ಮಾಡಿದ್ದಾರೆ. ಸಂವಿಧಾನ ಬದಲಾವಣೆ ಮಾಡುವುದು ಖಚಿತವೆಂದು ಹೇಳಿಕೆ ನೀಡಿ ತಮ್ಮ ಕ್ಷೇತ್ರದ ಮತದಾರರಿಗಲ್ಲದೆ ರಾಜ್ಯದ ಜನತೆಗೂ ಅವಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಆದ್ದರಿಂದ ಕೂಡಲೆ ಸಾರ್ವಜನಿಕ ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ರಾಜ್ಯಾದಾದ್ಯಂತ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಮಾರುತಿ ಗಂಜಗಿರಿಯವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…