ಬಿಸಿ ಬಿಸಿ ಸುದ್ದಿ

ಸೇಡಂ ನೃಪತುಂಗ ಮಹಾವಿದ್ಯಾಲಯzಲ್ಲಿ ಎಚ್.ಡಿ.ಎಫ್.ಸಿ. ಬ್ಯಾಂಕ ವತಿಯಿಂದ ನೇಮಕಾತಿ

ಸೇಡಂ: ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ , ನೃಪತುಂಗ ಪದವಿ ಮಹಾವಿದ್ಯಾಲಯ ಹಾಗೂ ಎಂ.ಕಾಂ. ಸ್ನಾತಕೋತ್ತರ ಕೇಂದ್ರದ ವತಿಯಿಂದ ನವೆಂಬರ 19, ಮಂಗಳವಾರ ದಂದು ಎಚ್.ಡಿ.ಎಫ್.ಸಿ. ಬ್ಯಾಂಕ ಸಹಯೋಗದೊಂದಿಗೆ ನೇಮಕಾತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಎಚ್.ಡಿ.ಎಫ್.ಸಿ. ಬ್ಯಾಂಕನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪದವಿ ಪೂರೈಸಿದ ಅರ್ಹ ಅಭ್ಯರ್ಥಿಗಳಿಗಾಗಿ ಸಂದರ್ಶನವನ್ನು ಕಾಲೇಜಿನ ಕ್ಯಾಂಪಸನಲ್ಲಿ ಏರ್ಪಡಿಸಲಾಗಿತ್ತು. ಸದರಿ ಅಭಿಯಾನದ ಉದ್ಘಟನೆಯಲ್ಲಿ ನೃಪತುಂಗ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥರಾದ ಡಾ: ರೇವಣಸಿದ್ದಯ್ಯಾ ಮಠ, ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತ ಅಭ್ಯರ್ಥಿಗಳಿಗೆ ಸಂದರ್ಶನ ಕುರಿತು ಮಾಹಿತಿ ನೀಡಿದರು.

ಎಚ್.ಡಿ.ಎಫ್.ಸಿ. ಬ್ಯಾಂಕ ಕಲಬುರ್ಗಿ ವಿಭಾಗದ ಹಿರಿಯ ಪ್ರಬಂಧಕರಾದ ಅನೀಲಕುಮಾರ ಪಟವಾಡೆ ಅವರು ಮಾತನಾಡಿ ಭಾರತದಲ್ಲಿ ಬ್ಯಾಂಕಿಂಗ ವ್ಯವಸ್ಥೆ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು. ಸಂಸ್ಥೆಯ ಸಹ ಕಾರ್ಯದರ್ಶಿಗಳಾದ ಡಾ: ಸದಾನಂದ ಬೂದಿ ಅವರು ಉಪಸ್ಥಿತರಿದ್ದು ಕಾರ್ಯಕ್ರಮದಲ್ಲಿ ಮಾತನಾಡಿ ಅಭ್ಯರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ನೃಪತುಂಗ ಮಹಾವಿದ್ಯಾಲದ ಪ್ರಾಚಾರ್ಯ ಪ್ರೊ: ಶಾಮಸುಂದರ್.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಾಣಿಜ್ಯ ವಿಭಾಗದ ರತ್ನಕುಮರ ನಿರ್ವಹಿಸಿ ವಂದಿಸಿದರು. ಸದರಿ ನೇಮಕಾತಿ ಅಭಿಯಾನದಲ್ಲಿ ೪೨ ಅರ್ಹ ಅಭ್ಯರ್ಥಿಗಳು ನೊಂದಾಯಿಸಿಕೊಂಡು ಸಂದರ್ಶನಕ್ಕೆ ಹಾಜರಾದರು. ಎಚ್.ಡಿ.ಎಫ್.ಸಿ. ಬ್ಯಾಂಕನ ಹಿರಿಯ ಅಧಿಕಾರಿಗಳಾದ ಸುನೀಲಕುಮಾರ ರಾಠೋಡ, ಹಾಗೂ ಸುನೀಲ ಬಬಲಾದಿ ಹಾಜರಿದ್ದು ಅಭ್ಯರ್ಥಿಗಳಿಗೆ ಸಂದರ್ಶನವನ್ನು ತೆಗೆದುಕೊಂಡರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ವಿಜಯಶಂಕರ ಹೊಸಪೇಟ, ಮಯೂರ ಕ್ಷೀರಸಾಗರ, ಜಗದೇವ ಸಾಲಳ್ಳಿ, ನಾಗರಾಜ ನಿರ್ಣಾ ಹಾಗೂ ಇತರ ಸಿಬ್ಬಂದಿ ವರ್ಗ ಹಾಜರಿದ್ದು ಅಭಿಯಾನವನ್ನು ಯಶಸ್ವಿಯಾಗಲು ಸಹಕರಿಸಿದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

8 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

13 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

17 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

21 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

24 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

31 mins ago