ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿ ಮತ್ತು 371ನೇj ಕಲಂ ತಿದ್ದುಪಡಿಯ ಸ್ಥಾನಮಾನದ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ ಆಯಾ ಜಿಲ್ಲಾವಾರು ಪ್ರಮುಖ ಜ್ವಲಂತ ಸಮಸ್ಯೆಗಳ ಬಗ್ಗೆ ಸಂಘಟಿತ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿಸುವದು ಅತಿ ಅವಶ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹಾಲಿ ಸಂಸದರು ಶಾಸಕರು ಸೇರಿದಂತೆ ಮಾಜಿ ಜನಪ್ರತಿನಿಧಿಗಳನ್ನು ಸಂಘಟಿಸುವದು ಅವಶ್ಯವಾಗಿದೆ. ಮೊದಲನೇ ಹಂತವಾಗಿ ಮಾಜಿ ಸಂಸದರು ಶಾಸಕರುಗಳ ಸಭೆಗಳು ನಡೆಸಲು ನಿರ್ಧರಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಜನಪರ ಹೋರಾಟ ಸಮಿತಿಯ ಲಕ್ಷ್ಮಣ ದಸ್ತಿ ತಿಳಿಸಿದ್ದಾರೆ.
12 ರಂದು ಶುಕ್ರವಾರ ಬೆಳಿಗ್ಗೆ 11.30 ಗಂಟೆಗೆ ಬೀದರ ಜಿಲ್ಲೆಯ ಮಾಜಿ ಸಂಸದರ,ಶಾಸಕರ ಸಭೆ ನಿಯೋಜಿಸಲಾಗಿದೆ. ಈ ಸಭೆಯಲ್ಲಿ ನಮ್ಮ ಪ್ರದೇಶದ ಕಲ್ಯಾಣದ ಬಗ್ಗೆ ಸಂಘಟಿತ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿವ ಕುರಿತು ಅದರಂತೆ ಪಕ್ಷಾತೀತವಾಗಿ ನಡೆಸುವ ಈ ಕಾರ್ಯದ ಸಮನ್ವಯ ಒಕ್ಕೂಟ ರಚನೆಯ ಬಗ್ಗೆ ನಿರ್ಧಾರ ಸೇರಿದಂತೆ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು.
ಸದರಿ ಈ ಮಹತ್ವದ ಸಭೆಯಲ್ಲಿ ಮಾಜಿ ಸಂಸದರಾದ ಶಾಸಕರುಗಳಾದ ನರಸಿಂಗರಾವ ಸೂರ್ಯವಂಶಿ, ಪ್ರಕಾಶ ಖಂಡ್ರೆ, ಸುಭಾಷ ಕಲ್ಲೂರ, ಗುಂಡಪ್ಪ ವಕೀಲರು, ಖಾಜಿ ಹರ್ಷದ ಅಲಿ, ಮಲ್ಲಿಕಾರ್ಜುನ ಖುಭಾ, ಪುಂಡಲೀಕರಾವ, ಎಂ. ಜಿ.ಮೂಳೆ,ಅಮರನಾಥ ಪಾಟೀಲ ಭಾಗವಹಿಸುತ್ತಿದ್ದಾರೆ.
ಎಂದು ಸಭೆಯ ಸಂಯೋಜಕರು ಪಕ್ಷಾತೀತ ಹೋರಾಟಗಾರರಾದ ಲಕ್ಷ್ಮಣ ದಸ್ತಿ, ಸಂಘಟಕರಾದ ಶ್ಯಾಮರಾವ ಪ್ಯಾಟಿ, ಶಾಮ ನಾಟಿಕರ,ಜ್ಞಾನಮಿತ್ರ, ಅನಂತ ರೆಡ್ಡಿ, ರೂಹನ ಕುಮಾರ ಜಂಟಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…