ಸ್ಮಾರ್ಟ ಕ್ಲಾಸ್‌ನಿಂದ ಮಕ್ಕಳಲ್ಲಿ ಸ್ಮರಣ ಶಕ್ತಿ ಹೆಚ್ಚುತ್ತದೆ: ಶರಣು ವಸ್ತ್ರದ್

0
99

ಶಹಾಬಾದ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಬುಧವಾರ ನಗರದ ರಾಷ್ಟ್ರಭಾಷಾ ಶಿಕ್ಷಣ ಸಮಿತಿಯಲ್ಲಿ ಸ್ಮಾರ್ಟ್ ಕ್ಲಾಸ್ ತರಗತಿಯನ್ನು ಉದ್ಘಾಟನೆ ಮಾಡಲಾಯಿತು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಜಿಲ್ಲಾ ಸಂಯೋಜಕ ಶರಣಪ್ಪ ವಸ್ತ್ರದ್ ಮಾತನಾಡಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ವತಿಯಿಂದ ಮಕ್ಕಳು ನೂತನ ತಂತ್ರಜ್ಞಾನದ ಶಿಕ್ಷಣದ ಮೂಲಕ ಹೆಚ್ಚು ಕಲಿಯುವಂತಾಗಲು ಸ್ಮಾರ್ಟ ಕ್ಲಾಸ್ ನಡೆಸಲು ಈ ಆಂಡ್ರೈಡ್ ಟಿವಿಯ ಅಗತ್ಯ ನೆರವು ನೀಡಿದೆ.

Contact Your\'s Advertisement; 9902492681

ಇದರಿಂದ ಮಕ್ಕಳಲ್ಲಿ ಆಸಕ್ತಿ ಹೆಚ್ಚುತ್ತದೆ.ಕಲಿಕೆ ಪರಿಣಾಮಕಾರಿಯಾಗುತ್ತದೆ.ಮಕ್ಕಳಲ್ಲಿ ಸ್ಮರಣ ಶಕ್ತಿ ಹೆಚ್ಚುವ ಮೂಲಕ ಮಕ್ಕಳ ಶ್ರೇಯೋಭಿವೃದ್ಧಿಗೆ ಸಹಕಾರಿಯಾಗುತ್ತದೆ.ಆದ್ದರಿಂದ ಈ ಭಾಗದ ಮಕ್ಕಳು ಹಾಗೂ ಶಿಕ್ಷಕರು ಸ್ಮಾರ್ಟ ಕ್ಲಾಸ್‌ನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರಲ್ಲದೇ ಕಲ್ಯಾಣ ಕರ್ನಾಟಕ ವತಿಯಿಂದ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಶಿಕ್ಷಕ ಚನ್ನಬಸಪ್ಪ ಕೊಲ್ಲೂರ್ ಮಾತನಾಡಿ,ಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಆಧುನಿಕತೆಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆಯಿದೆ.ನೂತನ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕಲಿಕೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಸ್ಮಾರ್ಟ ತರಗತಿ ನಡೆಸಲು ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯವಾದುದು.ಅಲ್ಲದೇ ಶಿಕ್ಷಕರು ಹಾಗೂ ಮಕ್ಕಳು ಇದರ ಸಂಪರ್ಣ ಸದುಪಯೋಗ ಪಡೆದುಕೊಳ್ಳಲಿದ್ದಾರೆ ಎದು ಹೇಳಿದರು.

ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ದಿಲೀಪ್ ಯಲಶೆಟ್ಟಿ, ಶಹಾಬಾದ-ವಾಡಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ತಾಲೂಕಾ ಸಂಯೋಜಕ ಮಲ್ಲಿಕಾರ್ಜುನ ಇಟಗಿ,ಚಂದ್ರಕಾಂತ ಗೊಬ್ಬೂರಕರ್, ಸುಭಾಷ ಜಾಪೂರ, ಅಣವೀರಪ್ಪ ಬಾಳಿ, ಸುನೀಲ ಗುಡೂರ್, ಮುಖ್ಯಗುರುಮಾತೆ ದಮಯಂತಿ ಸೂರ್ಯವಂಶಿ, ಶಿಕ್ಷಕ ಬಾಬಾ ಸಾಹೇಬ ಸಾಳುಂಕೆ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here