ಶಹಾಬಾದ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಬುಧವಾರ ನಗರದ ರಾಷ್ಟ್ರಭಾಷಾ ಶಿಕ್ಷಣ ಸಮಿತಿಯಲ್ಲಿ ಸ್ಮಾರ್ಟ್ ಕ್ಲಾಸ್ ತರಗತಿಯನ್ನು ಉದ್ಘಾಟನೆ ಮಾಡಲಾಯಿತು.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಜಿಲ್ಲಾ ಸಂಯೋಜಕ ಶರಣಪ್ಪ ವಸ್ತ್ರದ್ ಮಾತನಾಡಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ವತಿಯಿಂದ ಮಕ್ಕಳು ನೂತನ ತಂತ್ರಜ್ಞಾನದ ಶಿಕ್ಷಣದ ಮೂಲಕ ಹೆಚ್ಚು ಕಲಿಯುವಂತಾಗಲು ಸ್ಮಾರ್ಟ ಕ್ಲಾಸ್ ನಡೆಸಲು ಈ ಆಂಡ್ರೈಡ್ ಟಿವಿಯ ಅಗತ್ಯ ನೆರವು ನೀಡಿದೆ.
ಇದರಿಂದ ಮಕ್ಕಳಲ್ಲಿ ಆಸಕ್ತಿ ಹೆಚ್ಚುತ್ತದೆ.ಕಲಿಕೆ ಪರಿಣಾಮಕಾರಿಯಾಗುತ್ತದೆ.ಮಕ್ಕಳಲ್ಲಿ ಸ್ಮರಣ ಶಕ್ತಿ ಹೆಚ್ಚುವ ಮೂಲಕ ಮಕ್ಕಳ ಶ್ರೇಯೋಭಿವೃದ್ಧಿಗೆ ಸಹಕಾರಿಯಾಗುತ್ತದೆ.ಆದ್ದರಿಂದ ಈ ಭಾಗದ ಮಕ್ಕಳು ಹಾಗೂ ಶಿಕ್ಷಕರು ಸ್ಮಾರ್ಟ ಕ್ಲಾಸ್‌ನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರಲ್ಲದೇ ಕಲ್ಯಾಣ ಕರ್ನಾಟಕ ವತಿಯಿಂದ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
ಶಿಕ್ಷಕ ಚನ್ನಬಸಪ್ಪ ಕೊಲ್ಲೂರ್ ಮಾತನಾಡಿ,ಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಆಧುನಿಕತೆಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆಯಿದೆ.ನೂತನ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕಲಿಕೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಸ್ಮಾರ್ಟ ತರಗತಿ ನಡೆಸಲು ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯವಾದುದು.ಅಲ್ಲದೇ ಶಿಕ್ಷಕರು ಹಾಗೂ ಮಕ್ಕಳು ಇದರ ಸಂಪರ್ಣ ಸದುಪಯೋಗ ಪಡೆದುಕೊಳ್ಳಲಿದ್ದಾರೆ ಎದು ಹೇಳಿದರು.
ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ದಿಲೀಪ್ ಯಲಶೆಟ್ಟಿ, ಶಹಾಬಾದ-ವಾಡಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ತಾಲೂಕಾ ಸಂಯೋಜಕ ಮಲ್ಲಿಕಾರ್ಜುನ ಇಟಗಿ,ಚಂದ್ರಕಾಂತ ಗೊಬ್ಬೂರಕರ್, ಸುಭಾಷ ಜಾಪೂರ, ಅಣವೀರಪ್ಪ ಬಾಳಿ, ಸುನೀಲ ಗುಡೂರ್, ಮುಖ್ಯಗುರುಮಾತೆ ದಮಯಂತಿ ಸೂರ್ಯವಂಶಿ, ಶಿಕ್ಷಕ ಬಾಬಾ ಸಾಹೇಬ ಸಾಳುಂಕೆ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…