ಟಿಕ್‍ಟಾಕ್ ಗೆ ಯುವತಿ ಬಲಿ

0
232

ಕೋಲಾರ: ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಟಿಕ್‍ಟಾಕ್ ವಿಡಿಯೋ ಮಾಡಲು ಹೋಗಿ ಹೊಲದ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಸಂಭವಿಸಿದೆ.

ಮಾಲಾ ಮೃತಪಟ್ಟ ವಿದ್ಯಾರ್ಥಿನಿ. ಕೋಲಾರ ಮಹಿಳಾ ಕಾಲೇಜಿನಲ್ಲಿ ಬಿ.ಎ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಾಲಾ. ಶುಕ್ರವಾರ, ಕೃಷಿ ಹೊಂಡದ ಬಳಿ ಟಿಕ್‍ಟಾಕ್ ವಿಡಿಯೋ ಮಾಡುವಾಗ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಸಂಜೆ ಹೊಲದ ಬಳಿ ಹೋಗಿ ಅಲ್ಲಿದ್ದ ಕೃಷಿಹೊಂಡದ ಬಳಿ ತನ್ನ ಮೊಬೈಲ್ ಕೈಯಲ್ಲಿ ಹಿಡಿದುಕೊಂಡು ಒಬ್ಬಳೇ ಟಿಕ್‍ಟಾಕ್ ಮಾಡುತ್ತಿದ್ದ ಸಂದರ್ಭದಲ್ಲಿ ಮಾಲಾ ಮೊಬೈಲ್ ಸಮೇತ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದಿದ್ದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ.  ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಆಕೆಯನ್ನು ಕಾಪಾಡಲು ಸಾಧ್ಯವಾಗಿಲ್ಲ ಕಾರಣ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಪೋಷಕರು ಮಾಲಾ ಹೊಲಕ್ಕೆ ಹೋಗಿ ತುಂಬಾ ಸಮಯವಾಗಿದೆ ಗಾಬರಿಗೊಂಡು ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿದುಬಂದೆ.

ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here