ಬಿಸಿ ಬಿಸಿ ಸುದ್ದಿ

೧೧ ನವೆಂಬರ್ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನ

ಕಲಬುರಗಿ: ’ಅತ್ಯಂತ ತರಾತುರಿಯಲ್ಲಿ ಎನ್‌ಇಪಿ-೨೦೨೦ರ ಹೇರಿಕೆಯನ್ನು ಒಪ್ಪುವುದಿಲ್ಲ’, ’ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ಒದಗಿಸಿ’ ಎಂಬ ಘೋಷಣೆಗಳನ್ನು ಕೂಗುತ್ತಾ, ಇಂದು ನಗರದ ಜಿಲ್ಲಾಧಿಕಾರಿ ಕಛೇರಿ ಎದರುಗಡೆ ಹತ್ತಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಎಐಡಿಎಸ್‌ಓ ನೇತೃತ್ವದಲ್ಲಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಸಭೆಯನ್ನು ಉದ್ದೇಶಿಸಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಎಐಡಿಎಸ್‌ಓ ನ ಜಿಲ್ಲಾ ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿ?ನಿ ರವರು, ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕರ್ನಾಟಕ ರಾಜ್ಯದಲ್ಲಿ ಎನ್‌ಇಪಿ-೨೦೨೦ ಅನ್ನು ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ. ಇದನ್ನು ರಾಜ್ಯದ ಶಿಕ್ಷಣ ತಜ್ಞರು, ಉಪನ್ಯಾಸಕರು, ಸಾಹಿತಿಗಳು, ವಿದ್ಯಾರ್ಥಿಗಳು ಹಾಗು ಪೋಷಕರು ವ್ಯಾಪಕ ವಿರೋಧಿಸಿದ್ದೇವೆ. ಅತ್ಯಂತ ತರಾತುರಿಯಲ್ಲಿ, ಯಾವುದೇ ಪೂರ್ವಭಾವಿ ತಯಾರಿ ಇಲ್ಲದೆ ಏಕಾಏಕಿ ಎನ್‌ಇಪಿ-೨೦೨೦ರ ಭಾಗವಾಗಿರುವ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಅನುಷ್ಠಾನಕ್ಕೆ ತಂದಿದೆ. ತರಗತಿಗಳು ಆರಂಭವಾಗಿದ್ದರೂ ಸಹ, ಸರ್ಕಾರದ ಬಳಿ ಪಠ್ಯಕ್ರಮ ತಯಾರಿಲ್ಲ, ಪಠ್ಯಪುಸ್ತಕಗಳು ಇಲ್ಲ. ಆ ಮೂಲಕ ರಾಜ್ಯದ ಶಿಕ್ಷಕ ವರ್ಗ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಂಧಕಾರವಾಗಿದೆ. ಎಂದು ಅಭಿಪ್ರಾಯ ಪಟ್ಟರು.

ಮುಂದುವರೆದು, ರಾಷ್ಟ್ರೀಯ ಶಿಕಸಷ ಣಿತಿ-೨೦೨೦ ಅನ್ನು ಜಾರಿಗೆ ತರುತ್ತಿರುವ ರಾಜ್ಯ ಸರ್ಕಾರ, ಹಿಂದಿನ ಶೈಕ್ಷಣಿಕ ನೀತಿಯಲ್ಲಿ ಯಾವ ಲೋಪದೋಷಗಳಿದ್ದವು, ಯಾವ ಕಾರಣಕ್ಕೆ ನೂತನ ನೀತಿಯ ಅನುಷ್ಠಾನ ಆಗುತ್ತಿದೆ ಎಂಬ ವಿಷಯಗಳ ಬಗ್ಗೆ ಯಾವುದೇ ಉತ್ತರ ನೀಡಿಲ್ಲ ಅಷ್ಟೇ ಅಲ್ಲ, ಅತ್ಯಂತ ವ್ಯಾಪಕ ವಿರೋಧಗಳ ನಡುವೆಯೂ, ಅಪ್ರಜಾತಾಂತ್ರಿಕವಾಗಿ, ತರಾತುರಿಯಲ್ಲಿ ಶಿಕ್ಷಣ ನೀತಯನ್ನು ಜಾರಿ ಮಾಡುತ್ತಿದೆ.

ರಾಜ್ಯದ ಶಿಕ್ಷಣ ವ್ಯವಸ್ಥೆ ಈಗಾಗಲೇ ಅತ್ಯಂತ ಅಧೋಗತಿಯ ಸ್ಥಿತಿಯಲ್ಲಿ ಇದೆ. ಶಿಕಷಣದ ಖಾಸಗೀಕರಣ, ದುಬಾರಿ ಶುಲ್ಕಗಳಿಂದ ಶಿಕ್ಷಣ ಪಡೆಯುವವರ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ. ಕಳೆದ ೧೫ ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು ೯ ಸಾವಿರ ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿವೆ. ಏಕ ಶಿಕ್ಷಕ ಶಾಲೆಗಳು ಶೇ.೫೮ರಷ್ಟುಇದೆ. ಕೇವಲ ೧೩ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಇದ್ದರೆ, ಬರೋಬ್ಬರಿ ೨೧೦ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಕಳೆದ ಕೆಲವು ವರ್ಷಗಳಲ್ಲಿ ತಲೆ ಎತ್ತಿವೆ. ೧೭ ಸರ್ಕಾರಿ ವೈದ್ಯಕೀಯ ಕಾಲೇಜುಗಳಿದ್ದರೆ, ೩೮ ಖಾಸಗೀ ವೈದ್ಯಕೀಯ ಕಾಲೇಜುಗಳಿವೆ. ಅಂದರೆ, ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಏರುತ್ತಿದೆ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಇಳಿಮುಖವಾಗುತ್ತಿದೆ.

ಈ ಸವಾಲುಗಳಿಗೆ ಎನ್‌ಇಪಿ-೨೦೨೦ ಉತ್ತರ ನೀಡಿದೆಯೇ? ಸರ್ಕಾರಿ ಶಾಲೆಗಳಲ್ಲಿ ೩೦ಕ್ಕಿಂತ ಕಡಿಮೆ ಇರುವ ಶಾಲೆಗಳನ್ನು ಒಂದೆಡೆ ಸೇರಿಸಿ ’ಸಮೂಹ ಶಾಲೆ’ಗಳಾಗಿ ಮಾಡುತ್ತೇವೆ ಎಂದು ಪ್ರತಿಪಾದಿಸುವ ಎನ್‌ಇಪಿ, ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು, ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಶಿಕ್ಷಕರ ನೇಮಕಾತಿ ಮಾಡಲು ಅಥವಾ ೩.೨ ಕೋಟಿಯಷ್ಟು ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಸಂದರ್ಭದಲ್ಲಿ, ಅವರನ್ನು ಹೇಗೆ ವಾಪಸ್ ಶಿಕ್ಷಣದ ಪರಿಧಿಗೆ ತರಬೇಕು, ಅವರನ್ನು ಹೇಗೆ ಪ್ರೇರೇಪಿಸಬೇಕು, ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಸಮೂಹ ಶಾಲೆ ಎಂಬ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ದುರಂತ.

ಇದರೊಂದಿಗೆ, ಈ ನೀತಿಯಲ್ಲಿ ಪ್ರಸ್ತಾಪವಾಗಿರುವ ಹಲವು ಅಂಶಗಳು ನೇರವಾಗಿ ಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ಹಾಗು ಕೋಮುವಾದಿಕರಣಕ್ಕೆ ಕಾರಣವಾಗುತ್ತದೆ ಎಂಬುದರ ಕುರಿತು ಅಭಿಪ್ರಾಯಗಳು ಬಂದಿವೆ. ಈ ಎಲ್ಲ ಕಾರಣಗಳಿಂದ, ರಾಜ್ಯ ಸರ್ಕಾರ ಶಿಕ್ಷಣದಲ್ಲಿ ಹೇರಿರುವ ಎನ್‌ಇಪಿ-೨೦೨೦ ಅನ್ನು ವಾಪಸ್ ಪಡೆಯಬೇಕು ಎಂದು ವಿದ್ಯಾರ್ಥಿಗಳು, ಶಿಕ್ಷಕರು ಆಗ್ರಹಿಸುತ್ತೇವೆ ಎಂದು ಹೇಳಿದರು.

ಅದೆರಿತೀಯಾಗಿ ಪ್ರತಿಭಟನೆಯನ್ನು ಉದ್ದಶಿಸಿ ಜಿಲ್ಲಾ ಸಮಿತಿ ಸದಸ್ಯರಾದ ತುಳಜರಾಮ ಎನ್ ಕೆ ಮಾತನಾಡುತ್ತಾ ಪ್ರತಿಭಟನಾ ದಿನದ ಮತ್ತೊಂದು ಬೇಡಿಕೆಯಾಗಿದ್ದ ಉಚಿತ ಬಸ್‌ಪಾಸ್ ಎಲ್ಲ ವಿದ್ಯಾರ್ಥಿಗಳಿಗೂ ಒದಗಿಸಿ ಎಂದು ಆಗ್ರಹಿಸಿದರು. ಕೋವಿಡ್ ಮಾಹಾಮಾರಿ ಅಪ್ಪಳಿಸಿ, ಲಾಕ್‌ಡೌನ್ ಆದ ಹೊನ್ನೆಲೆಯಲ್ಲಿ ಶೈಕ್ಷಣಿಕ ವರ್ಷವೇ ಏರುಪೇರಾಗಿತ್ತು. ಲಕ್ಷಾಂತರ ಕುಟುಂಬಗಳು ಆರ್ಥಿಕವಾಗಿ ನಲುಗಿರುವ ಹಿನ್ನೆಲೆಯಲ್ಲಿ, ಸರ್ಕಾರ ಶಾಲಾ ಕಾಲೇಜು ಶುಲ್ಕದ ಜೊತೆ ಬಸ್‌ಪಾಸ್ ಶುಲ್ಕವನ್ನು ಕಟ್ಟಬೇಕು ಎಂಬ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹೊರಿಸಬಾರದು. ಈ ವರ್ಷ ಎಲ್ಲ ವಿದ್ಯಾರ್ಥಿಗಳಿಗೂ ಬಸ್‌ಪಾಸ್ ಉಚಿತವಾಗಿ ನೀಡಬೇಕು ಎಂದು ಹೇಳಿದರು.

ಪ್ರತಿಭಟನೆಯ ನೆತೃತ್ವವನ್ನು ಜಿಲ್ಲಾ ಸಮಿತಿ ಸದಸ್ಯರಾದ ಅರುಣ್ ಹಿರೆಬಾನೂರ ವಹಿಸಿದ್ದರು. ಸಭೆಯಲ್ಲಿ ಎಐಡಿಎಸ್‌ಓ ಜಿಲ್ಲಾಧ್ಯಕ್ಷರಾದ ಹಣಮಂತ ಎಸ್ ಹೆಚ್, ಜಿಲ್ಲಾ ಸಮಿತಿ ಸದಸ್ಯರಾದ ಶಿಲ್ಪಾ ಬಿ ಕೆ,ವೆಂಕಟೇಶ, ಪ್ರೀತಿ ದೊಡ್ಡಮನಿ, ಕಿರಣ್ ಜಿ ಮಾನೆ, ನಾಗರಾಜ ರಾವೂರ್ ಹಾಗೂ ಹಲವಾರು ವಿದ್ಯಾ??ಗಳು ಭಾಗಿಯಾಗಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago