ಸೇಡಂ: ಪಟ್ಟಣದ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಪಟ್ಟಣದ ವಾಲ್ಮೀಕಿ ಬಡಾವಣೆಯ ವಿವಿಧ ಪಕ್ಷದ ಮುಖಂಡರು ಜೆಡಿಎಸ್ ಪಕ್ಷದ ಮುಖಂಡ ಬಾಲರಾಜ್ ಗುತ್ತೇದಾರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಬಾಲರಾಜ್ ಗುತ್ತೇದಾರ ಮಾತನಾಡಿ ಸೇಡಂ ಮತಕ್ಷೇತ್ರದಲ್ಲಿ ಬೂಥ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುತ್ತಿದೇವೆ. ಪ್ರತಿ ಹಳ್ಳಿಗಳಿಗೆ ಭೇಟಿಯಾಗಿ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೆಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಜನತೆಗೆ ರೈತರಿಗೆ, ಯುವಕರಿಗಾಗಿ ಜಾರಿಗೊಳಿಸಿರು ಕಾರ್ಯಕ್ರಮಗಳನ್ನು ಕ್ಷೇತ್ರದ ಜನರಿಗೆ ತಿಳಿಸುತ್ತಿದ್ದೇವೆ ಆದಕಾರಣ ಮತಕ್ಷೇತ್ರದಲ್ಲಿ ಅನೇಕ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಕೊವಿಡ್ 2 ನೇ ಅಲೆಯಲ್ಲಿ ನಮ್ಮ ಪಕ್ಷದ ವತಿಯಿಂದ ಪ್ರತಿ ಹಳ್ಳಿಗಳಲ್ಲಿ ಸ್ಯಾನಿಟೆಜರ್ ಸಿಂಪರಣೆ, ಉಚಿತ 2 ಅಂಬ್ಯುಲೇನ್ಸ ಮೂಲಕ ಸೇವೆ, ಆಹಾರ ಪದಾರ್ಥದ ಕಿಟ್ ವಿತರಣೆ, ಕೊವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ವಯಕ್ತಿಕ ಸಹಾಯಧನ ಸೇರಿದಂತೆ ಅನೇಕ ಜನಪರ ಕೇಲಸಗಳು ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸೇಡಂ ನಗರದ ವಾಲ್ಮೀಕಿ ಬಡಾವಣೆಯ ಭೀಮು, ಮಲ್ಲಿಕಾರ್ಜುನ್ , ರಮೇಶ್, ಅಂಬರೀಷ್, ಜಗನ್ನಾಥ, ಮಹೇಶ್, ಭೀಮಾಶಂಕರ್, ಮಲ್ಲಿಕಾರ್ಜುನ, ಶರಣು, ಅನಿಲ್, ಗುಂಡಪ್ಪ, ಮಹಾದೇವ, ಇನ್ನಿತರರು ಪಕ್ಷಕ್ಕೆ ಸೇರ್ಪಡೆಯಾದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…