ಕಲಬುರಗಿ: ಸಕ್ತ 2021-22ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ಸಾಲ ಯೋಜನೆಯಡಿ ಸಾಮಾನ್ಯ ಪ್ರವೇಶ (ಸಿ.ಇ.ಟಿ./ನೀಟ್) ಪರೀಕ್ಷೆಗೆ ಹಾಜರಾದ ಮತೀಯ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಂದ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಸಿ.ಇ.ಟಿ/ನೀಟ್ ಪರೀಕ್ಷೆಗೆ ಹಾಜರಾದ ವಿವಿಧ ವೃತ್ತಿಪರ ಕೋರ್ಸ್‍ಗಳಿಗೆ, ಸೇರಬಯಸುವÀ ವಿದ್ಯಾರ್ಥಿಗಳಿಗೆ ಗರಿಷ್ಠ 75,000 ರೂ. ಗಳವರೆಗೆ ಶೇ. 2 ರಷ್ಟು ಸೇವಾ ಶುಲ್ಕ ಆಧಾರದ ಮೇಲೆ ಹೊಸದಾಗಿ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ನಿಗಮದ https://kmdconline.karnataka.gov.in ಅಥವಾ www.kmdc.kar.nic.in/Arivu2 ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಗಳು ಅರ್ಜಿಯ ಪ್ರಿಂಟ್‍ಔಟ್‍ನ್ನು ತೆಗೆದುಕೂಂಡು ಕ್ಯೂಆರ್ ಕೋಡನೊಂದಿಗೆ ಇತರ ಅವಶ್ಯಕ ದಾಖಲಾತಿಗಳೊಂದಿಗೆ ನಿಗಮದ ಕಲಬುರಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವು ‘ಕೌನ್ಸಲಿಂಗ ಕೊನೆಯ ಹಂತ ಮುಗಿಯುವ ಮೊದಲು ಇರುತ್ತದೆ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಎಸ್.ಆರ್. ರೆಸಿಡೆನ್ಸಿ, ಪ್ಲಾಟ್ ನಂ. 1881, ಮೊದಲನೆ ಮಹಡಿ, ಡಾ. ಎಲ್.ಎಸ್. ರಾಠಿ ಆಸ್ಪತ್ರೆ ಎದುರುಗಡೆ, ಹಳೆ ಜೇವರ್ಗಿ ರಸ್ತೆ, ಕಲಬುರಗಿ-585102 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-232425ಗೆ ಸಂಪರ್ಕಿಸಲು ಕೋರಲಾಗಿದೆ.