ಸುರಪುರ: ತಾಲೂಕಿನ ಮಾಲಗತ್ತಿ ಗ್ರಾಮ ಪಂಚಾಯತಿ ಅಭೀವೃಧ್ಧಿ ಅಧಿಕಾರಿ ವಿವಿಧ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ದಲಿತ ಸೇನೆ ಸಂಘಟನೆಯಿಂದ ನಗರದ ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಮಾಲಗತ್ತಿ ಗ್ರಾಮ ಪಂಚಾಯತಿ ಅಭೀವೃಧ್ಧಿ ಅಧಿಕಾರಿ ಎಸ್.ಬಿ.ಎಮ್ ಇ.ಬಿ.ಆರ್ ಯೋಜನೆಯಡಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಸಿದ್ದು ಪಿಡಿಓ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಗ್ರಹಿಸಿದರು.ಇದರ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗು ಮನವಿ ಸಲ್ಲಿಸಲಾಗಿದೆ.
ಆದರೆ ಇದುವರೆಗೂ ಕ್ರಮ ಜರುಗಿಸಿಲ್ಲ ಆದ್ದರಿಂದ ಈಗ ತಾಲೂಕು ಪಂಚಾಯತಿ ಮುತ್ತಿಗೆ ಮೂಲಕ ಎಚ್ಚರಿಕೆ ನೀಡುತ್ತಿದ್ದು ಮಾಲಗತ್ತಿ ಗ್ರಾಮ ಪಂಚಾಯತಿಯಲ್ಲಿ ನಡೆದ ಈ ಎಲ್ಲಾ ಹಗರಣಗಳ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬರೆದ ಮನವಿಯನ್ನು ತಾ.ಪಂ ವ್ಯವಸ್ಥಾಪಕ ವೆಂಕೋಬ ಬಾಗಲಿ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸೇನೆಯ ಜಿಲ್ಲಾಧ್ಯಕ್ಷ ಅಶೋಕ ಹೊಸ್ಮನಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಣ್ಣ ಗೋನಾಲ,ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಸದಾಶಿವ ಬೊಮ್ಮನಹಳ್ಳಿ,ತಾಲೂಕು ಅಧ್ಯಕ್ಷ ಹುಲಗಪ್ಪ ದೇವತ್ಕಲ್,ರವಿ ಬೊಮ್ಮನಹಳ್ಳಿ,ಅಂಬ್ರೇಶ ಬೊಮ್ಮನಹಳ್ಳಿ,ಸಂತೋಷ ಜೈನಾಪುರ,ಮಹಿಬೂಬ ಪಟೇಲ್,ಶಿವಣ್ಣ ನಾಗರಾಳ,ಮೌನೇಶ ಚಿಂಚೋಳಿ,ಚಂದ್ರು ಆಲ್ಹಾಳ,ಶರಣು ಬೊಮ್ಮನಹಳ್ಳಿ,ಹಣಮಂತ ದೊಡ್ಮನಿ,ಗುತ್ತಪ್ಪ ಮುದನೂರು,ಸಂತೋಷ ಯಕ್ತಾಪುರ,ನಾಗು ಗೋಗಿಕೇರಿ ಸೇರಿದಂತೆ ಅನೇಕರಿದ್ದರು.