ಉಚಿತ ಆರೋಗ್ಯ ತಪಾಸಣಾ ಶಿಬಿರ

0
6

ಮಾಲೂರು: ತಾಲೂಕಿನ ಕಸಬಾ ಹೋಬಳಿ ಮಡಿವಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಯುವಸೇನೆ ಮತ್ತು ಯುವಶಕ್ತಿ ಕರ್ನಾಟಕ ವತಿಯಿಂದ ಹಾಗೂ ಮಾಲೂರಿನ ಮಾನಸ ಭರಣಿ ಆಸ್ಪತ್ರೆಯ ಸಹಯೋಗದಲ್ಲಿ ವಿನಯ್ ಗೌಡ.ಪಿ.ಎಸ್ ರವರ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಅಕ್ಕ ಪಕ್ಕದ ಗ್ರಾಮಗಳಿಂದ ಆಗಮಿಸಿದ ನೂರಾರು ಜನರು ಶಿಬಿರದ ಲಾಭವನ್ನು ಪಡೆದುಕೊಂಡರು. ಆರೋಗ್ಯ ಇದ್ದರೆ ನಾವು ಸುಖ­ವಾಗಿ ಬಾಳಬಹುದು. ಕಷ್ಟಪಟ್ಟು ದುಡಿದ ಹಣವನ್ನು ಆಸ್ಪತ್ರೆಗೆ ಸುರಿ­ಯುವ ಬದಲು ಕಾಯಿಲೆ ಬರದಂತೆ ತಡೆಯು­ವುದು ಜಾಣತನ ಎಂದು ಯುವಸೇನೆಯ ಸಂಸ್ಥಾಪಕರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ವಿನಯ್ ಗೌಡ.ಪಿ.ಎಸ್ ರವರು ತಿಳಿಸಿದರು.

Contact Your\'s Advertisement; 9902492681

ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್‌, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ತಪಾಸಣೆ ಹಾಗೂ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂದು ಅವರು ತಿಳಿಸಿದರು.

ಮೊದಲಿಗೆ ಶಿಬಿರವನ್ನು ಮಡಿವಾಳ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ತೊರ‍್ನಹಳ್ಳಿ, ನೊಸಗೆರೆ ಸೇರಿದಂತೆ ಮಾಲೂರಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು. ಈ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಬರುವ ಸಾರ್ವಜನಿಕರಿಗೆ ಉಚಿತ ಊಟ ಹಾಗೂ ವಾಹನ ಸೌಲಭ್ಯವನ್ನು ಒದಗಿಸಲಾಗಿತ್ತು.

ಈ ಸಂದರ್ಭದಲ್ಲಿ ಯುವಸೇನೆಯ ಸಂಸ್ಥಾಪಕರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ವಿನಯ್ ಗೌಡ ಪಿ.ಎಸ್, ಯುವಶಕ್ತಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ರಾಜ್ಯ ಉಪಕಾರ್ಯದರ್ಶಿ ವಿ. ಪ್ರಕಾಶ್, ಜಿಲ್ಲಾಧ್ಯಕ್ಷ ಅರವಿಂದ್, ತಾಲ್ಲೂಕು ಅಧ್ಯಕ್ಷ ಅಜೀಜ್, ಹಾಗೂ ಯುವಸೇನೆ ಅಧ್ಯಕ್ಷ ಜಯರಾಮ್,  ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀರಾಮ್, ಧನಸಿಂಗ್, ಮಂಜುನಾಥ್, ವೆಂಕಟೇಶ್, ರಾಘವೇಂದ್ರ, ಎಸ್.ಡಿ.ಎಂ.ಸಿ ಸದಸ್ಯರಾದ  ವೆಂಕಟೇಶ್, ಸುರೇಶ್, ಆರ್. ಕುಮಾರ್, ರತ್ನ ಭಾರತ ರೈತ ಸಂಘದ ಪ್ರ.ಕಾರ್ಯದರ್ಶಿ ರವೀಂದ್ರ ಹಾಗೂ  ಊರಿನ ಗ್ರಾಮಸ್ಥರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here