ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಯ ಜೊತೆಗೆ ‘ಅಮ್ಮ ಗೌರವ’ ಪುರಸ್ಕಾರಕ್ಕೆ ಐವರನ್ನು ಆಯ್ಕೆ ಮಾಡಲಾಗಿದೆ.
ಈ ಬಾರಿಯ ‘ಅಮ್ಮ ಗೌರವ’ ಪುರಸ್ಕಾರಕ್ಕೆ, ರಂಗಭೂಮಿ ಕ್ಷೇತ್ರದ ಹಿರಿಯ ನಟ ಮಂಡ್ಯ ರಮೇಶ್, ಹಿರಿಯ ವಿದ್ವಾಂಸರಾದ ಡಾ. ಬಸವರಾಜ ಸಬರದ, ಹಿರಿಯ ಪತ್ರಕರ್ತ ಶಿವರಾಯ ದೊಡ್ಡಮನಿ, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ನಿರ್ಮಲಾ ಪಾಟೀಲ ಬೊಮ್ನಳ್ಳಿ ಹಾಗೂ ಸಮಾಜ ಸೇವೆ ಕ್ಷೇತ್ರದಲ್ಲಿ ಜಯಶ್ರೀ ಐನಾಪುರ, ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.
ಕಳೆದ ಹನ್ನೆರಡು ವರ್ಷಗಳಿಂದ ಆರಂಭಗೊಂಡ ‘ಅಮ್ಮ ಗೌರವ ಪುರಸ್ಕಾರ’ಕ್ಕೆ ಈ ಬಾರಿಯೂ ನಾಡು-ನುಡಿಗೆ ನೀಡಿದ ಕೊಡುಗೆಯನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಅಮ್ಮ ಗೌರವ ಪುರಸ್ಕಾರ ನೀಡಿ ಸತ್ಕರಿಸಲಾಗುತ್ತದೆ.
ಹೊಲಿಗೆ ಮಷಿನ್ ವಿತರಣೆ : ಕಳೆದ ಹನ್ನೆರಡು ವರ್ಷಗಳಿಂದ ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಮಾಡಿಕೊಡುವ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳಿಗೆ ನೀಡುತ್ತಿರುವ ಹೊಲಿಗೆ ಮಷಿನ್‌ಗಳನ್ನು ಈ ಬಾರಿಯೂ ನಿವೃತ್ತ ಮೇಷ್ಟ್ರು ನಾಗಪ್ಪ ಮುನ್ನೂರ್ ಸ್ಮರಣಾರ್ಥ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಟ್ಟಣದ ಐತಿಹಾಸಿಕ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ೨೧ ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವು ನ.೨೬ ರಂದು ಸಂಜೆ ೫.೩೦ ಕ್ಕೆ ಆಯೋಜಿಸಲಾಗಿದೆ ಎಂದು ‘ಅಮ್ಮ ಪ್ರಶಸ್ತಿ’ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…